June 15, 2026
Monday, June 15, 2026
spot_img

ಸಂಪುಟ ಪುನರ್‌ರಚನೆ ಚರ್ಚೆ ಚುರುಕು: ದೆಹಲಿಗೆ ತೆರಳಲು ತಯಾರಾದ ಶಾಸಕರ ದಂಡು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆ ಕುರಿತು ಕಸರತ್ತು ಮತ್ತೆ ವೇಗ ಪಡೆದುಕೊಂಡಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳು ಹೈಕಮಾಂಡ್ ಭೇಟಿಗೆ ಸಿದ್ಧತೆ ನಡೆಸಿದ್ದಾರೆ.

ಈ ಹಿನ್ನೆಲೆಯಲ್ಲಿ ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಮತ್ತೆ ದೆಹಲಿಗೆ ತೆರಳಲು ಮುಂದಾಗಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೇ 6 ಅಥವಾ 7ರಂದು ದೆಹಲಿಗೆ ಹೋಗಿ ಎಐಸಿಸಿ ನಾಯಕತ್ವವನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:

ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮಂಡಿಸಿದ್ದಾಗಿ ಹೇಳಿದರು. ಮೇ 4 ನಂತರ ಸಂಪುಟ ಪುನರ್‌ರಚನೆ ಪ್ರಕ್ರಿಯೆ ಆರಂಭವಾಗಲಿದೆ ಎಂಬ ಭರವಸೆ ನೀಡಲಾಗಿದ್ದು, ಮೇ ಅಂತ್ಯದೊಳಗೆ ಬದಲಾವಣೆ ನಡೆಯುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಸುರ್ಜೇವಾಲ ಅವರು ಬಹುತೇಕ ಸಚಿವರನ್ನು ಬದಲಿಸುವ ಯೋಜನೆ ಕುರಿತು ಸೂಚನೆ ನೀಡಿದ್ದಾಗಿ ಹೇಳಿದ ಪಟ್ಟಣ್, ಹೊಸ ಮುಖಗಳಿಗೆ ಹೆಚ್ಚಿನ ಅವಕಾಶ ನೀಡಬೇಕೆಂದು ಒತ್ತಾಯಿಸಿದರು. ನಾಲ್ಕು ಬಾರಿ ಗೆದ್ದ 40 ಶಾಸಕರು ಸಚಿವ ಸ್ಥಾನಕ್ಕಾಗಿ ನಿರೀಕ್ಷೆಯಲ್ಲಿದ್ದು, ಅವಕಾಶ ಸಿಗುವವರೆಗೂ ಹೋರಾಟ ಮುಂದುವರಿಯುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !