April 29, 2026
Wednesday, April 29, 2026
spot_img

ಸಿಹಿ ಸುದ್ದಿ ಹಂಚಿಕೊಂಡ ಡಾಲಿ ಧನಂಜಯ್ ದಂಪತಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ‘ನಟ ರಾಕ್ಷಸ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಮತ್ತು ಅವರ ಪತ್ನಿ ಡಾ. ಧನ್ಯತಾ ತಮ್ಮ ಜೀವನದ ಹೊಸ ಹಂತಕ್ಕೆ ಕಾಲಿಟ್ಟಿದ್ದಾರೆ. ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ ಸಂತಸದ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಬೇಬಿ ಬಂಪ್ ಫೋಟೋಶೂಟ್ ಚಿತ್ರಗಳನ್ನು ಹಂಚಿಕೊಂಡಿರುವ ಅವರು “Our universe is expanding” ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಈ ಪೋಸ್ಟ್ ಇದೀಗ ಅಭಿಮಾನಿಗಳಿಂದ ಅಭಿನಂದನೆಗಳ ಸುರಿಮಳೆಯನ್ನೇ ಪಡೆಯುತ್ತಿದೆ.

ಇದನ್ನೂ ಓದಿ:

ಇತ್ತೀಚೆಗಷ್ಟೇ ಗರ್ಭಧಾರಣೆಯ ಕುರಿತಂತೆ ಫೋಟೋ ಒಂದು ವೈರಲ್ ಆಗಿದ್ದರೂ, ದಂಪತಿ ಅಧಿಕೃತವಾಗಿ ಮಾಹಿತಿ ನೀಡಿರಲಿಲ್ಲ. ಇದೀಗ ಸುಂದರ ಫೋಟೋಶೂಟ್ ಮೂಲಕ ತಮ್ಮ ಸಂತೋಷವನ್ನು ಬಹಿರಂಗಪಡಿಸಿದ್ದಾರೆ.

ಡಾಲಿ ಧನಂಜಯ್ ಮತ್ತು ಡಾ. ಧನ್ಯತಾ 2025ರ ಫೆಬ್ರವರಿ 16ರಂದು ಮೈಸೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !