July 5, 2026
Sunday, July 5, 2026
spot_img

ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಭೀಕರ ದುರಂತ: ಘಟನಾ ಸ್ಥಳಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಮೃತಪಟ್ಟಿದ್ದಾರೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬೆಂಗಳೂರು ನಗರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದ್ದು, ಈ ವೇಳೆ ಬೌರಿಂಗ್‌ ಆಸ್ಪತ್ರೆಯ ಹೊರಗೆ ಬೀದಿಬದಿಯಲ್ಲಿ, ತಳ್ಳುಗಾಡಿಯಲ್ಲಿ, ಫುಟ್‌ಪಾತ್‌ ಮೇಲೆ ಕೆಲವರು ವ್ಯಾಪಾರ ಮಾಡುತ್ತಿದ್ದ ವೇಳೆ ಧಿಡೀರ್ ಗೋಡೆ ಕುಸಿದು ಬಿದ್ದ ಪರಿಣಾಮ ವ್ಯಾಪಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇತ್ತ ವಿಷಯವನ್ನು ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘಟನಾ ಸ್ಥಳಕ್ಕೆ ತೆರಳಿ ಸ್ಥಳದಲ್ಲಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಗೆ ತೆರಳಿ , ಆರೋಗ್ಯವನ್ನು ವಿಚಾರಿಸಿ, ಸಾಂತ್ವಾನ ಹೇಳಿ ಧೈರ್ಯ ತುಂಬಿದರು. ಈ ವೇಳೆ ಸರ್ಕಾರದಿಂದ ಎಲ್ಲಾ ನೆರವನ್ನು ನೀಡುವುದಾಗಿ ಭರವಸೆ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !