April 30, 2026
Thursday, April 30, 2026
spot_img

ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವ್ಯಕ್ತಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಸುರಿದ ಗಾಳಿ ಮಳೆಗೆ ಜೆಪಿ ನಗರದ ಬಳಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಇದಕ್ಕೂ ಮುನ್ನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಕುಸಿದು 7 ಮಂದಿ ಮೃತಪಟ್ಟಿದ್ದರು.

ಜೆಪಿ ನಗರದ 15ನೇ ಕ್ರಾಸ್ ಬಳಿ ಮಳೆಯಿಂದ ವಿದ್ಯುತ್ ಕಂಬದಲ್ಲಿ ವಿದ್ಯುತ್ ಹರಿದಿದೆ. ಇದೇ ದಾರಿಯಲ್ಲಿ ಬರುತ್ತಿದ್ದ ವ್ಯಕ್ತಿ ಕಂಬ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಇತ್ತ ಘಟನೆ ಸಂಭವಿಸಿದರೂ ಕೆಇಬಿ ಅಧಿಕಾರಿಗಳು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ತೆರಳಿಲ್ಲ. ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ಇದಕ್ಕೂ ಮುನ್ನ ಬೌರಿಂಗ್ ಆಸ್ಪತ್ರೆ ಬಳಿಯ ಕೌಂಪೌಂಡ್ ಕುಸಿದ ಏಳು ಮಂದಿ ಮೃತಪಟ್ಟಿದ್ದು, ಅದರಲ್ಲಿ ಮೂವರು ಕರ್ನಾಟಕ ಮೂಲದವರಾದರೆ, ಇಬ್ಬರು ಕೇರಳ ಹಾಗೂ ಇತ್ತಿಬ್ಬರು ಅಸ್ಸಾಂ ಹಾಗೂ ಉತ್ತರ ಪ್ರದೇಶದ ಮೂಲದವರಾಗಿದ್ದಾರೆ.

ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !