August 24, 2026
Monday, August 24, 2026
spot_img

ಪಿಕಪ್‌ ವಾಹನ ಪಲ್ಟಿಯಾಗಿ ಭೀಕರ ಅಪಘಾತ: ಇಬ್ಬರು ಮಕ್ಕಳು ಸೇರಿ 14 ಜನರ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಧ್ಯಪ್ರದೇಶದ ಧಾರ್‌ನಲ್ಲಿ ಕಾರ್ಮಿಕರು ತೆರಳುತ್ತಿದ್ದ ಪಿಕಪ್‌ ವಾಹನ ಪಲ್ಟಿಯಾಗಿದ್ದು, ಇಬ್ಬರು ಮಕ್ಕಳು ಸೇರಿದಂತೆ 14 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತಿರ್ಲಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಪಿಕಪ್‌ ವಾಹನದಲ್ಲಿ 30 ರಿಂದ 35 ಮಂದಿ ಕಾರ್ಮಿಕರು ಹಾಗೂ ಮಕ್ಕಳು ಅಮ್ಜೆರಾ ಕಡೆಗೆ ಪ್ರಯಾಣ ಬೆಳೆಸುತ್ತಿದ್ದರು. ಇದಕ್ಕಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್‌ ವಾಹನ ಡಿವೈಡರ್‌ಗೆ ಡಿಕ್ಕಿಯಾಗಿದೆ.

ಪಿಕಪ್‌ ವಾಹನದಲ್ಲಿದ್ದ ಎಲ್ಲಾ ಕಾರ್ಮಿಕರು ಕೂಡ ವಾಹನದ ಕೆಳಬದಿಗೆ ಸಿಲುಕಿದ್ದಾರೆ. ಸ್ಥಳದಲ್ಲಿಯೇ 14 ಮಂದಿ ಮೃತಪಟ್ಟಿದ್ದರೆ, ಉಳಿದವರೆಲ್ಲ ಗಂಭೀರವಾಗಿ ಗಾಯಗೊಂಡು ಒದ್ದಾಡಿದ್ದಾರೆ.

ದಾರಿಯಲ್ಲಿ ಹೋಗುತ್ತಿದ್ದ ಜನರೇ ಗಾಡಿಗಳನ್ನು ನಿಲ್ಲಿಸಿ ಜನರ ರಕ್ಷಣೆಗೆ ಧಾವಿಸಿದ್ದಾರೆ. ಗಾಯಗೊಂಡು ಜೀವ ಉಳಿಸಿಕೊಂಡಿದ್ದ ಜನರನ್ನು ಹೊರಕ್ಕೆ ಎಳೆದಿದ್ದಾರೆ. ಗಾಯಾಳುಗಳನ್ನು ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !