October 15, 2026
Thursday, October 15, 2026
spot_img

ಎಲ್ಲಾ ಆಸ್ಪತ್ರೆಯ ಕಟ್ಟಡ, ಕಾಂಪೌಂಡ್‌ಗಳನ್ನು ಪರಿಶೀಲಿಸಿ ವರದಿ ನೀಡಿ: ಅಧಿಕಾರಿಗಳಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಬುಧವಾರ ಸುರಿದ ಗಾಳಿಗೆ ಮಳೆಗೆ ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು ಏಳು ಮಂದಿ ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರಕಾರ, ಎಲ್ಲಾ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ಸಂಬಂಧ ವೈದ್ಯಕೀಯ ಶಿಕ್ಷಣ,ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಆದೇಶ ನೀಡಿದ್ದು, ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ ನೀಡಲು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಈಗಾಗಲೇ ಬೌರಿಂಗ್‌ ಆಸ್ಪತ್ರೆಯ ದುರಂತದ ಕುರಿತು ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ದುರಂತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿಗಳು 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ವೈದ್ಯರಿಗೆ ತಿಳಿಸಲಾಗಿದೆ. ಮುಂದೆ ರಾಜ್ಯದಲ್ಲಿ ಮುಂದೆ ಈ ರೀತಿಯ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Must Read