April 30, 2026
Thursday, April 30, 2026
spot_img

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ತೆರೆ ಎಳೆದ ಮಲ್ಲಿಕಾರ್ಜುನ ಖರ್ಗೆ: ಈ ಕುರಿತು ಏನು ಹೇಳಿದ್ರು ನೋಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಚರ್ಚೆಯ ಕೇಂದ್ರ ಬಿಂದುವಾಗಿದ್ದ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇತಿಶ್ರೀ ಹಾಡಲು ಮುಂದಾಗಿದ್ದು, ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಹೇಳುವ ಮೂಲಕ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯಕ್ಕೆ ಮುಖ್ಯಮಂತ್ರಿಗಳಿದ್ದಾರೆ, ಚೆನ್ನಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಹೀಗಿರುವಾಗ ಇಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಯಾವಾಗ ಸಿಎಂ ಬದಲಾವಣೆ ಮಾಡಬೇಕು ಎಂದು ಸೋನಿಯಾ ಗಾಂಧಿಯವರು, ರಾಹುಲ್ ಗಾಂಧಿಯವರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಕೆಲವರು ನಾನು ಸಿಎಂ ಆದರೆ ಉತ್ತಮ ಅನ್ನುತ್ತಾರೆ. ಆದರೆ ಇದ್ದೆಲ್ಲವೂ ನಮ್ಮ ಹಣೆಬರಹ ಅನ್ನುವುದಕ್ಕಿಂತ ಪಕ್ಷದ ಸಿದ್ಧಾಂತ ಪ್ರಕಾರ ನಿರ್ಣಯಗಳನ್ನು ತೆಗೆದುಕೊಳ್ಳುತ್ತಾರೆ. ಮುಖ್ಯವಾಗಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !