April 30, 2026
Thursday, April 30, 2026
spot_img

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್ ಕುಸಿದು ದುರಂತ: ಕಾರ್ಯಪಾಲಕ ಎಂಜಿನಿಯರ್‌ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರೀ ಗಾಳಿ ಮಳೆಗೆ ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್ ಕುಸಿದು ಏಳು ಮಂದಿ ಮೃತಪಟ್ಟಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಂತ್ರಿಕ ವೈಫಲ್ಯ ಮತ್ತು ಕರ್ತವ್ಯ ಲೋಪ ಎಸಗಿರುವ ಬೌರಿಂಗ್ ಆಸ್ಪತ್ರೆ ವ್ಯಾಪ್ತಿಯ ಕಾರ್ಯಪಾಲಕ ಇಂಜಿನಿಯರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲು ಆದೇಶ ಹೊರಡಿಸಿದ್ದಾರೆ.

ಬೌರಿಂಗ್‌ ಆಸ್ಪತ್ರೆಯಲ್ಲಿ ನಡೆದ ಘಟನೆ ಕುರಿತು ಚರ್ಚೆ ನಡೆಸಲು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಈ ವೇಳೆ ಸಿಎಂ, ಆಸ್ಪತ್ರೆಯ ಮುಖ್ಯಸ್ಥರನ್ನು ತರಾಟೆ ತೆಗೆದುಕೊಂಡರು. ನೊಟೀಸ್ ನೀಡಲು ಸೂಚನೆ ನೀಡಿದ್ದಾರೆ.

ಇಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಗೋಡೆಗೆ ಹಾನಿ ಆಗುವ ರೀತಿಯಲ್ಲಿ ಕಾಮಗಾರಿ ಮಣ್ಣನ್ನು ಸುರಿದಿದ್ದು ಯಾಕೆ ಎಂದು ಪ್ರಶ್ನಿಸಿದ ಅವರು, ಈ ರೀತಿಯ ನಿರ್ಲಕ್ಷ್ಯ ಕ್ಷಮಾರ್ಹವಲ್ಲ ಎಂದು ಅಸಮಾಧಾನ ಹೊರಹಾಕಿದರು.

ಇದೇ ವೇಳೆ ನಗರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಹಾಗೂ ಹಳೆಯ ಕಟ್ಟಡಗಳ ಸ್ಥಿತಿಗತಿಯನ್ನು ಪರಿಶೀಲಿಸಿ ವರದಿ ನೀಡುವಂತೆ ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆಗೆ ಸೂಚನೆ ನೀಡಿ, ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಸಾರ್ವಜನಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಖಡಕ್ ಆಗಿ ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !