May 1, 2026
Friday, May 1, 2026
spot_img

ವೇಗವಾಗಿ ಬಂದು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾ*ವು, ಇನ್ನೊಬ್ಬರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅತಿ ವೇಗವಾಗಿ ಬಂದ ಕಾರೊಂದು ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಈ ಘಟನೆಯ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅದರಲ್ಲಿ ಕೆಂಪು ಬಣ್ಣದ ಮಾರುತಿ ಬ್ರೆಜ್ಜಾ ಕಾರು ಅತಿ ವೇಗವಾಗಿ ಬಂದು ನಿಯಂತ್ರಣ ತಪ್ಪಿ, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರರು ರಸ್ತೆಯ ಮೇಲೆ ಬಿದ್ದಿದ್ದು, ಬೈಕ್ ಸಂಪೂರ್ಣ ಜಖಂ ಆಗಿದೆ.

ಬಳಿಕ ಅದೇ ಕಾರು ರಸ್ತೆಯ ಬದಿಯಲ್ಲಿ ತನ್ನ ದ್ವಿಚಕ್ರ ವಾಹನದಲ್ಲಿ ಕಾಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಧನವತ್ ಭಾಸ್ಕರ್ ಎಂಬ ಮತ್ತೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯ ನಂತರ, ಮೃತರ ಸಂಬಂಧಿಕರು ನಾರ್ಕೆಟ್‌ಪಲ್ಲಿ ರಸ್ತೆಯ ನಂದಿಪಾಡು ಬೈಪಾಸ್‌ನಲ್ಲಿ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಇದರಿಂದ ಸ್ವಲ್ಪ ಸಮಯ ಆ ಭಾಗದಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು. ಸದ್ಯ ಈ ಘಟನಾ ಸಂಬಂಧ ಬ್ರೆಜ್ಜಾ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !