October 15, 2026
Thursday, October 15, 2026
spot_img

ಪಂಜಾಬ್ ರಾಜಕಾರಣದಲ್ಲಿ ಹಠಾತ್ ಬೆಳವಣಿಗೆ: ವಿಶ್ವಾಸಮತ ಮಂಡಿಸಿದ ಭಗವಂತ್ ಮಾನ್ ಸರ್ಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸರ್ಕಾರವು ವಿಧಾನಸಭೆಯಲ್ಲಿ ವಿಶ್ವಾಸಮತ ಮಂಡಿಸಿದೆ.

ರಾಜ್ಯಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಉತ್ತಮ ಪ್ರದರ್ಶನ ನೀಡಲಿಲ್ಲ. ಜೊತೆಗೆ ಸೀಟು ಪ್ರಮಾಣವು ಕಡಿಮೆಯಾಗಿತ್ತು. ಹೀಗಾಗಿ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ, ಮ್ಯಾನ್ ಸರ್ಕಾರಕ್ಕೆ ಸ್ಪಷ್ಟ ಬಹುಮತವಿಲ್ಲ ಎಂದು ಆರೋಪಿಸಿದ್ದವು. ಈ ಹಿನ್ನೆಲೆ ಇಂದು ಮಾನ್ ನೇತೃತ್ವದ ಸರ್ಕಾರವು ವಿಶ್ವಾಸಮತ ಮಂಡಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದೆ.

ರಾಜ್ಯದಲ್ಲಿ ಆಪ್ ಸರಕಾರ ಸುಭದ್ರವಾಗಿದೆ, ಜೊತೆಗೆ ಶಾಸಕರು ಒಗ್ಗಟ್ಟಾಗಿದ್ದಾರೆ ಎಂಬುದನ್ನು ತೋರಿಸಲು ಈ ನಿರ್ಣಯ ತಂದಿದ್ದೇವೆ ಎಂದು ಹೇಳಿದರು.

ಇತ್ತ ವಿಧಾನ ಸಭೆಯಲ್ಲಿ ವಿಶ್ವಾಸಮತ ಮಂಡನೆಯ ವೇಳೆ ತೀವ್ರ ಗದ್ದಲ ಉಂಟಾಯಿತು. ಪ್ರತಿಪಕ್ಷದ ಸದಸ್ಯರು ಸ್ಪೀಕರ್ ಪೀಠದ ಮುಂದೆ ಪ್ರತಿಭಟನೆ ನಡೆಸಿದರು.

Must Read