October 10, 2026
Saturday, October 10, 2026
spot_img

ರಾಹುಲ್ ಗಾಂಧಿಗೆ ‘ಹೈ ರಿಲೀಫ್’: ಎಫ್‌ಐಆರ್ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕಾರ ಮಾಡಿದ್ದು, ರಾಹುಲ್ ಗಾಂಧಿಗೆ ಮಹತ್ವದ ಕಾನೂನು ನಿರಾಳತೆ ಸಿಕ್ಕಿದೆ. ವಿವಾದಾತ್ಮಕ ಹೇಳಿಕೆ ಸಂಬಂಧ ದಾಖಲಾದ ಈ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ಪ್ರಕರಣಕ್ಕೆ ತಾತ್ಕಾಲಿಕ ತೆರೆ ಬಿದ್ದಂತಾಗಿದೆ.

2025ರಲ್ಲಿ ನಡೆದ ಕಾಂಗ್ರೆಸ್ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ನಾವು ಈಗ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಭಾರತ ರಾಷ್ಟ್ರದ ವಿರುದ್ಧವೇ ಹೋರಾಡುತ್ತಿದ್ದೇವೆ’ ಎಂದು ನೀಡಿದ್ದ ಹೇಳಿಕೆ ದೇಶವಿರೋಧಿ ಸ್ವರೂಪದ್ದಾಗಿದೆ ಎಂದು ಆರೋಪಿಸಿ ದೂರು ಸಲ್ಲಿಸಲಾಗಿತ್ತು. ಈ ಹೇಳಿಕೆ ಸಾರ್ವಜನಿಕರ ಭಾವನೆಗೆ ಧಕ್ಕೆ ತಂದಿದ್ದು, ರಾಷ್ಟ್ರದ ಸ್ಥಿರತೆಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.

ಇದನ್ನೂ ಓದಿ:

ಈ ಹಿಂದೆ ಸಂಭಾಲ್ ನ್ಯಾಯಾಲಯವೂ ಇದೇ ಮನವಿಯನ್ನು ತಿರಸ್ಕರಿಸಿತ್ತು. ಆ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದ್ದರೂ, ಹೈಕೋರ್ಟ್ ಕೂಡ ಅದನ್ನು ಮಾನ್ಯ ಮಾಡಲಿಲ್ಲ. ಅರ್ಜಿಯ ವಿಚಾರಣೆ ಬಳಿಕ ನ್ಯಾಯಾಲಯ ಅದನ್ನು ವಜಾಗೊಳಿಸಿದ್ದು, ರಾಹುಲ್ ಗಾಂಧಿಗೆ ಮತ್ತೊಂದು ಪ್ರಕರಣದಲ್ಲಿ ಕಾನೂನು ಮಟ್ಟದಲ್ಲಿ ದೊಡ್ಡ ನೆಮ್ಮದಿ ದೊರೆತಿದೆ.

Must Read