June 18, 2026
Thursday, June 18, 2026
spot_img

ಗೆಲುವಿನ ಬಳಿಕ ಸೀದಾ ಪಕ್ಷದ ಕಚೇರಿಗೆ ಬರ್ಬೇಕು: ಅಭ್ಯರ್ಥಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ವಿಜಯ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿರುವ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೂ ಮುನ್ನ ನಟ-ರಾಜಕಾರಣಿ ವಿಜಯ್ ತಮ್ಮ ಪಕ್ಷದ ಅಭ್ಯರ್ಥಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

ಚೆನ್ನೈನ ಪಣೈಯೂರ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ 233 ಅಭ್ಯರ್ಥಿಗಳಿಗೆ ಸ್ಪಷ್ಟ ಸಂದೇಶ ನೀಡಿದ ಅವರು, ಮತ ಎಣಿಕೆ ದಿನ ಸಂಪೂರ್ಣ ಎಚ್ಚರಿಕೆಯಿಂದಿರಲು ಸೂಚಿಸಿದ್ದಾರೆ.

ಇದನ್ನೂ ಓದಿ:

ಗೆಲುವಿನ ಬಳಿಕ ಯಾವುದೇ ರಾಜಕೀಯ ಸಂಪರ್ಕಕ್ಕೆ ಹೋಗದೆ ನೇರವಾಗಿ ಪಕ್ಷದ ಕಚೇರಿಗೆ ಬರಬೇಕು ಎಂದು ವಿಜಯ್ ಕಟ್ಟುನಿಟ್ಟಾಗಿ ಹೇಳಿದ್ದಾರೆ. ಫಾರ್ಮ್ 17C ದಾಖಲೆಯನ್ನು ತಮ್ಮೊಂದಿಗೆ ಇಟ್ಟುಕೊಳ್ಳುವಂತೆ ಸೂಚಿಸಿರುವ ಅವರು, ಮತ ಎಣಿಕೆ ಪ್ರಕ್ರಿಯೆಯಲ್ಲಿ ಯಾವುದೇ ಲೋಪವಾಗದಂತೆ ಜಾಗರೂಕರಾಗಿರಿ ಎಂದು ಅಭ್ಯರ್ಥಿಗಳಿಗೆ ಕರೆ ನೀಡಿದ್ದಾರೆ.

ಒಗ್ಗಟ್ಟು ಮತ್ತು ಶಿಸ್ತು ಕಾಪಾಡಿಕೊಳ್ಳುವಂತೆ ಹೇಳಿರುವ ವಿಜಯ್, ನಾವು ಉತ್ತಮ ಅಂತರದಿಂದ ಗೆಲುವು ಸಾಧಿಸುವ ವಿಶ್ವಾಸದಲ್ಲಿದ್ದೇವೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ಸಮೀಕ್ಷೆಗಳು ಟಿವಿಕೆಗೆ ಉತ್ತಮ ಸ್ಥಾನಗಳ ಸಾಧ್ಯತೆ ತೋರಿಸಿರುವುದರಿಂದ, ತಮಿಳುನಾಡು ರಾಜಕೀಯದಲ್ಲಿ ಹೊಸ ಸಮೀಕರಣಗಳ ಚರ್ಚೆ ಮತ್ತಷ್ಟು ಗರಿಗೆದರಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !