May 2, 2026
Saturday, May 2, 2026
spot_img

ಮಹಿಳಾ ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ ಸಜ್ಜು: ಕೌರ್ ಸಾರಥ್ಯದಲ್ಲಿ ಬಲಿಷ್ಠ ತಂಡ ಪ್ರಕಟ!

ಹೊಸದಿಗಂತ ಡಿಜಿಟಲ್ ಡೆಸ್ಕ್:

2026ರ ಮಹಿಳಾ ಟಿ20 ವಿಶ್ವಕಪ್‌ ಗೆ ಇಂಗ್ಲೆಂಡ್‌ ಸಜ್ಜಾಗಿದ್ದು, ಜೂನ್ 12 ರಿಂದ ಜುಲೈ 5 ರವರೆಗೆ ಟೂರ್ನಿ ನಡೆಯಲಿದೆ. ಇದಕ್ಕಾಗಿ ಭಾರತವು 15 ಸದಸ್ಯರ ಬಲಿಷ್ಠ ತಂಡವನ್ನು ಇಂದು ಪ್ರಕಟಿಸಿದೆ.

ಹರ್ಮನ್ಪ್ರೀತ್ ಕೌರ್ ಸಾರಥ್ಯದಲ್ಲಿ ಭಾರತ ಮಹಿಳಾ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಭಾರತವು ಆಸ್ಟ್ರೇಲಿಯಾ, ಪಾಕಿಸ್ತಾನ, ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ ಮತ್ತು ನೆದರ್‌ಲ್ಯಾಂಡ್ಸ್ ತಂಡಗಳು ಒಂದು ಗುಂಪಿನಲ್ಲಿ ಸ್ಥಾನ ಪಡೆದುಕೊಂಡಿದೆ.

ಭಾರತೀಯ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶೈಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಭಾರತಿ ಫುಲ್ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್, ಶ್ರೀ ಚರಣಿ, ಯಾಸ್ತಿಕಾ ಭಾಟಿಯಾ, ನಂದಿನಿ ಶರ್ಮಾ, ಅರುಂಧತಿ ರೆಡ್ಡಿ, ರೇಣುಕಾ ಠಾಕೂರ್, ಕ್ರಾಂತಿ ಗೌಡ್, ಶ್ರೇಯಾಂಕಾ ಪಾಟೀಲ್, ರಾಧಾ ಯಾದವ್.

ಭಾರತವು ತನ್ನ ಅಭಿಯಾನವನ್ನು ಜೂನ್ 14 ರಂದು ಪಾಕಿಸ್ತಾನವನ್ನು ಎದುರಿಸುವ ಮೂಲಕ ಪ್ರಾರಂಭಿಸಲಿದೆ. ಬಳಿಕ ಜೂನ್ 17 ರಂದು ನೆದರ್ಲ್ಯಾಂಡ್ಸ್, ಜೂನ್ 21 ರಂದು ದಕ್ಷಿಣ ಆಫ್ರಿಕಾ, ಜೂನ್ 25 ರಂದು ಬಾಂಗ್ಲಾದೇಶ ಹಾಗೂ ಜೂನ್ 28 ರಂದು ಆಸ್ಟ್ರೇಲಿಯಾ ತಂಡಗಳ ಜೊತೆ ಪಂದ್ಯ ಆಡಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !