May 2, 2026
Saturday, May 2, 2026
spot_img

ಸಚಿವ ಸ್ಥಾನ ತ್ಯಾಗಕ್ಕೆ ನಾನು ಸಿದ್ಧ: ಅಚ್ಚರಿಯ ಹೇಳಿಕೆ ನೀಡಿದ ಶಿವಾನಂದ ಪಾಟೀಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ಕಳೆದ ಹಲವು ದಿನಗಳಿಂದ ಸದ್ದು ಮಾಡುತ್ತಿರುವ ಸಚಿವ ಸಂಪುಟ ಪುನಾರಚನೆ ವಿಚಾರ ಕುರಿತು ಸಚಿವ ಶಿವಾನಂದ ಪಾಟೀಲ್ ಮಹತ್ವದ ಹೇಳಿಕೆ ನೀಡಿದ್ದು, ನಾನು ಸಚಿವ ಸ್ಥಾನ ತ್ಯಾಗಕ್ಕೆ ಸಿದ್ದನಿದ್ದೇನೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆ ಅಂದಾಗ ಅಲ್ಲಿ ಬದಲಾವಣೆ ಅಗತ್ಯವಿದೆ. ಈ ವೇಳೆ ಹೊಸ ಮುಖಗಳಿಗೆ ಅವಕಾಶ ಸಿಗಲಿದೆ. ಇನ್ನು ಕೆಲವರು ಸಚಿವ ಸ್ಥಾನ ಉಳಿಸಿಕೊಳ್ಳೋ ಪ್ರಯತ್ನ ಮಾಡುವರು. ಆದರೆ ನಾನು ಯಾವ ಪ್ರಯತ್ನವನ್ನು ಮಾಡಲ್ಲ. ಸಚಿವ ಸ್ಥಾನ ತ್ಯಾಗಕ್ಕೂ ರೆಡಿ ಎಂದು ಹೇಳಿದರು.

ಈ ಹಿಂದೆಯೂ ನಾನು ಸಚಿವ ಸ್ಥಾನ ಸಿಗದ ಸಮಯದಲ್ಲೂ ತಾಳ್ಮೆಯಿಂದ ಕಾಯುತ್ತಿದ್ದೆ. ಕೊನೆಗೂ ಅವರೇ ಕರೆದು ನೀರು. ಹಾಗಾಗಿ ಯಾವ ಬದಲಾವಣೆ ನಡೆದರೂ ನನಗೇನು ಯೋಚನೆ ಇಲ್ಲ ಎಂದರು.

ಈಗಾಗಲೇ ಆನೇಕ ಶಾಸಕರು ದೆಹಲಿಯತ್ತ ದೌಡಾಯಿಸಿದ್ದು, ಸಚಿವ ಸ್ಥಾನಕ್ಕೆ ಕಾಂಗ್ರೆಸ್ ಹೈ ಕಮಾಂಡ್ ಮುಂದೆ ಲಾಬಿ ನಡೆಸುತ್ತಿದ್ದಾರೆ. ಇದರ ನಡುವೆ ಶಿವಾನಂದ ಪಾಟೀಲ್ ಮಾತು ಕುತೂಹಲ ಕೆರಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !