March 22, 2026
Sunday, March 22, 2026
spot_img

ನಟ ವಿಷ್ಣುವರ್ಧನ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ: ಸಿಎಂ ಸಿದ್ದರಾಮಯ್ಯಗೆ ಹಿರಿಯ ನಟಿಯರ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಹಸ ಸಿಂಹ ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ವೇಳೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದ್ದಾರೆ.

ಸಾಹಸ ಸಿಂಹ ವಿಷ್ಣುವರ್ಧನ್ ಅವರ ಪುಣ್ಯಭೂಮಿಗೆ ಅಭಿಮಾನ್‌ ಸ್ಟುಡಿಯೋದಲ್ಲಿ 10 ಗುಂಟೆ ಜಾಗವನ್ನು ನೀಡುವಂತೆ ಕೋರಲು ನಟಿ ಭಾರತಿ ವಿಷ್ಣುವರ್ಧನ್ ಹಾಗೂ ಅಳಿಯ ನಟ ಅನಿರುದ್ಧ್ ಜತ್ಕರ್ ಅವರು ನಾಳೆ (ಸೆ.3) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !