May 3, 2026
Sunday, May 3, 2026
spot_img

ಸಿದ್ದರಾಮಯ್ಯ ರಣತಂತ್ರಕ್ಕೆ ರಾಯರೆಡ್ಡಿ ಸಾಥ್? ಸಿಎಂ ಕುರ್ಚಿ ಕದನಕ್ಕೆ ಸಿಕ್ಕಿತು ಸ್ಪೋಟಕ ಟ್ವಿಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆಯ ಬಗ್ಗೆ ಚರ್ಚೆಗಳು ಜೋರಾಗಿವೆ. ಈ ನಡುವೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಹಿರಿಯ ಶಾಸಕ ಬಸವರಾಜ್ ರಾಯರೆಡ್ಡಿ ಅವರು ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ರಾಯರೆಡ್ಡಿ, ಒಂದು ವೇಳೆ ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆಯಾದರೆ ಆ ಸ್ಥಾನಕ್ಕೆ ಖರ್ಗೆಯವರೇ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಖರ್ಗೆ ಅವರು ಮುಖ್ಯಮಂತ್ರಿಯಾಗಬೇಕು ಎಂದು ನಾನು ವೈಯಕ್ತಿಕವಾಗಿ ಆಹ್ವಾನ ನೀಡಿದ್ದೇನೆ” ಎಂದು ಹೇಳುವ ಮೂಲಕ ಸಿಎಂ ಗಾದಿಯ ಕುರ್ಚಿ ಕದನಕ್ಕೆ ಹೊಸ “ಸ್ಪೋಟಕ ಟ್ವಿಸ್ಟ್” ನೀಡಿದ್ದಾರೆ.

ವಿಶೇಷವೆಂದರೆ, ಈ ನಡೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ರಣತಂತ್ರದ ಒಂದು ಭಾಗ ಎಂದು ರಾಯರೆಡ್ಡಿ ಸುಳಿವು ನೀಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ನಾಯಕತ್ವ ಬದಲಾವಣೆ ಮಾತುಗಳು ಸರ್ಕಾರದ ಸ್ಥಿರತೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಬಹುದು ಎಂಬ ಆತಂಕವನ್ನೂ ಅವರು ಹೊರಹಾಕಿದ್ದಾರೆ.

ಸಚಿವ ಸಂಪುಟ ಪುನಾರಚನೆಯ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ರಾಯರೆಡ್ಡಿ ಅವರ ಈ ಹೇಳಿಕೆ ಹೈಕಮಾಂಡ್ ಮಟ್ಟದಲ್ಲಿ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದು ಕುತೂಹಲ ಮೂಡಿಸಿದೆ. ಸದ್ಯಕ್ಕೆ ಕರ್ನಾಟಕ ಕಾಂಗ್ರೆಸ್‌ನಲ್ಲಿ “ಖರ್ಗೆ ಅಸ್ತ್ರ” ಪ್ರಯೋಗವಾಗುತ್ತಿರುವುದು ಹಲವು ನಾಯಕರ ನಿದ್ದೆಗೆಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !