May 3, 2026
Sunday, May 3, 2026
spot_img

ವೇಪಿಂಗ್ ವಿವಾದ | IPL ತಂಡಗಳಿಗೆ ಬಿಸಿಸಿಐ ಖಡಕ್ ವಾರ್ನಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್‌ ಮೈದಾನದಲ್ಲಿ ನಡೆದ ಒಂದು ಘಟನೆ ಇದೀಗ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಆಟಗಾರರ ವರ್ತನೆ ಬಗ್ಗೆ ಬಿಸಿಸಿಐ ಗಂಭೀರ ನಿಲುವು ತಾಳಿದೆ.

ರಾಜಸ್ಥಾನ್ ರಾಯಲ್ಸ್ ನಾಯಕ ರಿಯಾನ್ ಪರಾಗ್ ಡ್ರೆಸ್ಸಿಂಗ್ ರೂಮ್‌ನಲ್ಲಿ ಇ-ಸಿಗರೇಟ್ ಬಳಸಿದ ದೃಶ್ಯ ವೈರಲ್ ಆದ ಬೆನ್ನಲ್ಲೇ, ಮಂಡಳಿ ಕಠಿಣ ಎಚ್ಚರಿಕೆ ನೀಡಿದೆ.

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ನಡೆದ ಈ ಘಟನೆ ನಿಯಮ ಉಲ್ಲಂಘನೆಯಾಗಿ ಪರಿಗಣಿಸಲಾಗಿದ್ದು, ಪರಾಗ್‌ಗೆ ಪಂದ್ಯದ ಸಂಭಾವನೆಯ ಶೇ.25ರಷ್ಟು ದಂಡ ವಿಧಿಸಲಾಗಿದೆ. ಭಾರತದಲ್ಲಿ ಇ-ಸಿಗರೇಟ್ ನಿಷೇಧಿತವಾಗಿರುವುದರಿಂದ, ಈ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ:

ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಆಟಗಾರರು ಮೈದಾನದ ಒಳಗೂ ಹೊರಗೂ ಕ್ರೀಡೆಯ ಗೌರವ ಕಾಪಾಡಬೇಕು ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ. ಇಂತಹ ಘಟನೆಗಳು ಮರುಕಳಿಸಿದರೆ ಮತ್ತಷ್ಟು ಕಠಿಣ ನಿಯಮ ಜಾರಿಗೆ ಬರಲಿವೆ ಎಂದೂ ಎಚ್ಚರಿಸಿದ್ದಾರೆ.

ಇದೀಗ ಕೇವಲ ಆಟಗಾರರಷ್ಟೇ ಅಲ್ಲ, ನಿಯಮ ಮೀರುವ ತಂಡಗಳ ಮೇಲೂ ಕ್ರಮ ಕೈಗೊಳ್ಳುವ ಬಗ್ಗೆ ಮಂಡಳಿ ಚಿಂತನೆ ನಡೆಸಿದೆ. ಈ ಬೆಳವಣಿಗೆ ಐಪಿಎಲ್‌ನಲ್ಲಿ ಶಿಸ್ತು ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸುವ ಸೂಚನೆ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !