May 3, 2026
Sunday, May 3, 2026
spot_img

ಪರೀಕ್ಷಾ ಕೇಂದ್ರಕ್ಕೆ ಬರಲು 10 ನಿಮಿಷ ತಡ: ವಿದ್ಯಾರ್ಥಿನಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀಟ್​ ಪರೀಕ್ಷೆಗೆ ತಡವಾಗಿ ಬಂದ ಕಾರಣ ಪರೀಕ್ಷೆ ಬರೆಯಲು ಅವಕಾಶ ನೀಡದ್ದಕ್ಕೆ ಪರೀಕ್ಷಾ ಕೇಂದ್ರದ ಗೇಟ್​ ಮುಂದೆ ವಿದ್ಯಾರ್ಥಿನಿಯೊಬ್ಬಳು ಕಣ್ಣೀರು ಹಾಕಿದ ಘಟನೆ ನಡೆದಿದೆ.

ಬೆಂಗಳೂರಿನ ಯಲಹಂಕದ ಪ್ರಥಮ ದರ್ಜೆ ಕಾಲೇಜಿನಲ್ಲಿ ನೀಟ್ ಪರೀಕ್ಷೆ ಬರಲು 10 ನಿಮಿಷ ತಡವಾಗಿ ವಿದ್ಯಾರ್ಥಿನಿ ಆಗಮಿಸಿದ್ದಾಳೆ. ಆದರೆ ಸಿಬ್ಬಂದಿಗಳು ತಡವಾಗಿದೆ ಎಂದು ಪರೀಕ್ಷೆ ಬರೆಯಲು ನಿರಾಕರಿಸಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ನೀಟ್ ಎಕ್ಸಾಮ್ ಆರಂಭವಾಗಿದ್ದು, ಮಧ್ಯಾಹ್ನ 1:30ರ ವರೆಗೆ ಎಕ್ಸಾಮ್ ಸೆಂಟರ್ ಗೇಟ್ ಓಪನ್ ಆಗಿತ್ತು. ಆದರೆ ಟ್ರಾಫಿಕ್ ಜಾಮ್ ನಿಂದ ಯುವತಿ ಕೆಲ ನಿಮಿಷಗಳ ಕಾಲ ತಡವಾಗಿ ಬಂದಿದ್ದಾಳೆ. ಈ ವೇಳೆ ಸಿಬ್ಬಂದಿಗಳು ಗೇಟ್ ಕ್ಲೋಸ್ ಆಗಿದೆ ಎಂದು ಹೇಳಿ ಪ್ರವೇಶ ನಿರಾಕರಿಸಿದ್ದಾರೆ. ಇದರಿಂದ ಬೇಸರಗೊಂಡು ವಿದ್ಯಾರ್ಥಿನಿ ಪರೀಕ್ಷೆ ಬರೆಯದೆ ಕಣ್ಣೀರು ಹಾಕಿದ್ದಾಳೆ.ಇದೇ ರೀತಿಯಾಗಿ ನಗರದ ಚಾಲುಕ್ಯ ಸರ್ಕಲ್ ಬಳಿಯ ಆರ್​ಸಿ ಕಾಲೇಜಿನಲ್ಲೂ ಘಟನೆ ನಡೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !