ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಗೆ ಸಮೀಪದ ಗುರುಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಒಂದೇ ಕುಟುಂಬದ ಐವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಕುಟುಂಬದ ಮುಖ್ಯಸ್ಥ ಜೀವಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರಲ್ಲಿ 35 ವರ್ಷದ ಮಹಿಳೆ ಹಾಗೂ ಅವರ ನಾಲ್ವರು ಅಪ್ರಾಪ್ತ ಮಕ್ಕಳು ಸೇರಿದ್ದಾರೆ. ಶನಿವಾರ ರಾತ್ರಿ ಮನೆಯ ಮೊದಲ ಮಹಡಿಯಲ್ಲಿ ಕುಟುಂಬದವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ತಾಯಿ ಮತ್ತು ನಾಲ್ವರು ಮಕ್ಕಳನ್ನು ವೈದ್ಯರು ಮೃತರಾಗಿದ್ದಾರೆ ಎಂದು ಘೋಷಿಸಿದರು.
ಇದನ್ನೂ ಓದಿ:
ಇದೇ ವೇಳೆ ಕುಟುಂಬದ ಮುಖ್ಯಸ್ಥ ನಜೀಮ್ ನ ಮಣಿಕಟ್ಟು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮಡದಿ ಮಕ್ಕಳನ್ನು ಕೊಂದು ನಂತರ ನಜೀಮ್ ಆತ್ಮಹತ್ಯೆಗೆ ಯತ್ನಿಸಿದ್ದು ಪ್ರಾಣಪಾಯದಿಂದ ಪಾರಾಗಿದ್ದಾನೆ. ಘಟನಾ ಸ್ಥಳದಿಂದ ಹಾನಿಗೊಳಗಾದ ಮೊಬೈಲ್ ಫೋನ್ ಕೂಡ ಪತ್ತೆಯಾಗಿದ್ದು, ತನಿಖೆಗೆ ಮಹತ್ವದ ಸುಳಿವಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ವಿಚಾರಣೆಯಲ್ಲಿ ಕುಟುಂಬ ಗಂಭೀರ ಮಾನಸಿಕ ಒತ್ತಡದಲ್ಲಿತ್ತು ಎಂಬ ಮಾಹಿತಿ ಲಭ್ಯವಾಗಿದ್ದು, ಸಾವಿನ ನಿಖರ ಕಾರಣ ತಿಳಿಯಲು ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.



