ಹೊಸದಿಗಂತ ಡಿಜಿಟಲ್ ಡೆಸ್ಕ್:
ಶೃಂಗೇರಿ ವಿಧಾನ ಸಭಾ ಕ್ಷೇತ್ರದಲ್ಲಿನ ಅಂಚೆ ಮತ ಮರು ಎಣಿಕೆಯ ಹಿಂದೆ ದೊಡ್ಡ ಷಡ್ಯಂತ್ರ ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಟೀಕಿಸಿದ್ದಾರೆ.
ಮಾಧ್ಯಮಗಳಿಗೆ ಈ ಕುರಿತು ಭಾನುವಾರ ಪ್ರತಿಕ್ರಿಯೆ ನೀಡಿದ ಅವರು, ಈ ರೀತಿ ಆಗುತ್ತೆ ಎಂದು ಊಹೆ ಮಾಡಿರಲಿಲ್ಲ. ಇದರ ಹಿಂದೆ ದೊಡ್ಡ ಪ್ರಮಾಣದಲ್ಲಿ ಷಡ್ಯಂತ್ರ ಹಾಗೂ ವ್ಯವಸ್ಥಿತ ಅಪರಾಧ ನಡೆದಿದೆ. ಇದು ಪ್ರಜಾಪ್ರಭುತ್ವಕ್ಕೆ ಕಳಂಕ ಎಂದು ಕಿಡಿಕಾರಿದರು.
ಮಾಜಿ ಶಾಸಕ ಡಿ ಎನ್ ಜೀವರಾಜ್ ಅವರು ಅಧಿಕಾರಿಗಳ ದುರ್ಬಳಕೆ ಮಾಡಿಕೊಂಡು ಅಂಚೆ ಮತಗಳಲ್ಲಿ ಅಕ್ರಮ ಎಸಗಿದ್ದಾರೆ. ಈಗಾಗಲೇ ಮತ ಎಣಿಕೆ ಬಳಿಕ ಏಜೆಂಟರು ಹಾಗೂ ಅಧಿಕಾರಿಗಳು ಸಹಿ ಹಾಕಿದ್ದಾರೆ ಅಂದ ಮೇಲೆ ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಈ ವಿಚಾರವಾಗಿ ದೊಡ್ಡ ತನಿಖೆ ಆಗಬೇಕು. ನಾವು ಕಾನೂನು ಹೋರಾಟ ನಡೆಸುತ್ತೇವೆ ಎಂದು ತಿಳಿಸಿದರು.



