ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಬಿಸಿಲಿನ ಅಬ್ಬರ ಮಿತಿಮೀರಿದೆ. ಮೇ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ತಾಪಮಾನ ದಾಖಲಾಗಿದ್ದು, ಬಿಸಿಗಾಳಿಯ ಪ್ರಭಾವಕ್ಕೆ ಜನರು ತತ್ತರಿಸಿದ್ದಾರೆ.
ಇದರ ನಡುವೆ ಭಾರತೀಯ ಹವಾಮಾನ ಇಲಾಖೆಯ ಶುಭ ಸುದ್ದಿಯನ್ನು ನೀಡಿದ್ದು, ಈ ಬಾರಿ ಅವಧಿಗಿಂತ ಮೊದಲೇ ಮುಂಗಾರು ಮಳೆ ಪ್ರವೇಶಿಸಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಹಾಗೂ ಕೇರಳಕ್ಕೆ ಬೇಗನೇ ಆಗಮಿಸಲಿವೆ ಎಂದು ತಿಳಿಸಿದೆ.
ನೈಋತ್ಯ ಮುಂಗಾರು ಮಳೆಯು ಮೇ 14 ಮತ್ತು 16 ರ ನಡುವೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಪ್ರವೇಶಿಸಲಿದೆ. ಮೇ 25ರ ಬಳಿಕ ಕೇರಳಕ್ಕೆ ಬರಬಹುದು ಎಂದು ಅಂದಾಜಿಸಿವೆ.
ಸಾಮಾನ್ಯವಾಗಿ ಕೇರಳಕ್ಕೆ ಜೂನ್ 1ರ ಸಮಯಕ್ಕೆ ಮುಂಗಾರು ಮಳೆ ಪ್ರವೇಶಿಸುತ್ತದೆ. ಆದರೆ ಈ ಬಾರಿ ನೈಋತ್ಯ ಮುಂಗಾರು ಅವಧಿಗಿಂತ ಮುಂಚಿತವಾಗಿ ಅಂಡಮಾನ್ ಪ್ರವೇಶಿಸಿ, ಮೇ ಕೊನೆಯ ವಾರದಲ್ಲೇ ಕೇರಳಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದೇಶದ ಹಲವು ಭಾಗಗಳಲ್ಲಿ ಕೂಡ ಮೇ ತಿಂಗಳಲ್ಲಿ ವಾಡಿಕೆಯಿಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ . ಉತ್ತರ ಭಾರತ ಹಾಗೂ ಹಿಮಾಲಯದ ತಪ್ಪಲಿನ ಪ್ರದೇಶಗಳಲ್ಲಿ ಬಿಸಿಲ ತಾಪ ಹೆಚ್ಚು ಕಾಣಿಸಿಕೊಳ್ಳಬಹುದು ಮುನ್ಸೂಚನೆ ನೀಡಿದೆ.



