October 11, 2026
Sunday, October 11, 2026
spot_img

ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾ*ವು

ಹೊಸದಿಗಂತ ವರದಿ ಮಡಿಕೇರಿ:

ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ಸಿದ್ದಾಪುರ ಸಮೀಪದ ಗುಯ್ಯ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ವೀರಾಜಪೇಟೆಯ ಸುಂಕದಕಟ್ಟೆ ನಿವಾಸಿ ನಾಗರಾಜು (41) ಎಂದು ಗುರುತಿಸಲಾಗಿದೆ.

ಗುಯ್ಯ ದೇವಾಲಯ ಸಮೀಪದ ಕಾವೇರಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರ ಪೈಕಿ ನಾಗರಾಜು ಬೃಹತ್ ಗುಂಡಿಯಲ್ಲಿ ಸಿಲುಕಿ ಸಾವನ್ನಪ್ಪಿರುವುದಾಗಿ‌ ಹೇಳಲಾಗಿದೆ.

ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗ್ರಾಮಸ್ಥರ ನೆರವಿನೊಂದಿಗೆ ಮೃತದೇಹವನ್ನು ಹೊರ ತೆಗೆದಿದ್ದಾರೆ. ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read