ಹೊಸದಿಗಂತ ವರದಿ ಮಡಿಕೇರಿ:
ಪಂಚ ರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.
ಜಿಲ್ಲಾ ಕೇಂದ್ರ ಮಡಿಕೇರಿಯ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಸಿಹಿ ಹಂಚಿ,ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ, ಜಿಲ್ಲಾ ಉಪಾಧ್ಯಕ್ಷರಾದ ಬಿ.ಕೆ.ಅರುಣ್ ಕುಮಾರ್, ಮನು ಮಂಜುನಾಥ್, ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರಸಭಾ ಅಧ್ಯಕ್ಷೆ ಕಲಾವತಿ, ನಗರ ಅಧ್ಯಕ್ಷ ಉಮೇಶ್ ಸುಬ್ರಮಣಿ, ಬಿ.ಕೆ.ಜಗದೀಶ್, ಜಿ.ಎಂ.ಸತೀಶ್ ಪೈ, ಶಜಿಲ್ ಕೃಷ್ಣನ್, ಎಸ್.ಸಿ. ಸತೀಶ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ನಗರಸಭೆಯ ಬಿಜೆಪಿ ಸದಸ್ಯರು, ಎಸ್.ಸಿ.ಮೋರ್ಚಾದ ಪಿ.ಎಂ.ರವಿ ಸೇರಿದಂತೆ ಹಲವು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಇದನ್ನೂ ಓದಿ:
ಕುಶಾಲನಗರದಲ್ಲಿ ಸಂಭ್ರಮಾಚರಣೆ:
ಪಂಚರಾಜ್ಯಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮೂರು ರಾಜ್ಯಗಳಲ್ಲಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕೂಡುಮಂಗಳೂರು ಶಕ್ತಿ ಕೇಂದ್ರದ ವತಿಯಿಂದ, ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿಜೆಪಿ ಪಕ್ಷದ ಕಾರ್ಯಕರ್ತರು ಕೂಡಿಗೆಯ ಡೈರಿ ಸರ್ಕಲ್’ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಶಕ್ತಿ ಕೇಂದ್ರದ ಅಧ್ಯಕ್ಷ ದಿನೇಶ್, ಉಪಾಧ್ಯಕ್ಷ ಧರ್ಮ, ಕೂಡುಮಂಗಳೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಮನು ನಂಜುಂಡ, ಇಂದಿರಾ ರಮೇಶ್, ಕೂಡುಮಂಗಳೂರು ಶಕ್ತಿ ಕೇಂದ್ರ ಮಾಜಿ ಅಧ್ಯಕ್ಷ ಮಂಜುನಾಥ, ಕೆ. ವರದ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಗಣೇಶ್, ಓ.ಬಿ.ಸಿ ಮಂಡಲ ಕಾರ್ಯದರ್ಶಿ ರವಿ ಪಕ್ಷಿ, ಸಹಕಾರ ಸಂಘದ ನಿರ್ದೇಶಕ ಎಸ್. ಎಸ್. ಕೃಷ್ಣ, ಕೂಡಿಗೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಳಾ ಪ್ರಕಾಶ್, ಪಕ್ಷದ ಪ್ರಮುಖರಾದ ಕೇಶವ ರೈ, ಎಂ. ಬಿ. ಮಹೇಶ್, ಲೋಕೇಶ್, ಸುಬ್ಬಯ್ಯ, ಯೋಗೇಶ್, ರಾಜು, ಲೋಹಿತ್, ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಚಂದ್ರು ಮೂಡ್ಲಿಗೌಡ, ಮಂಜುನಾಥ, ಮಣಿಕಂಠ, ಪದ್ಮಾ, ಕನಕಾ, ಅನಿತಾ ಮತ್ತಿತರರು ಹಾಜರಿದ್ದರು.



