ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ರಾಜಕೀಯ ದಿಕ್ಕಿನ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸಿದರು.
ದೇಶ ಕಮ್ಯೂನಿಸ್ಟ್ ಸಿದ್ಧಾಂತಗಳಿಂದ ದೂರ ಸಾಗುತ್ತಿರುವ ಈ ಸಂದರ್ಭದಲ್ಲಿ, ಕಾಂಗ್ರೆಸ್ ಅದೇ ಮಾರ್ಗವನ್ನು ಅನುಸರಿಸುತ್ತಿದೆ ಎಂದು ಮೋದಿ ಆರೋಪಿಸಿದರು. ಕಾಡಿನಲ್ಲಿ ನೆಲೆ ಕಳೆದುಕೊಳ್ಳುತ್ತಿರುವ ಮಾವೋವಾದಿ ಚಿಂತನೆಗಳು ಈಗ ನಗರ ರಾಜಕಾರಣದೊಳಗೆ ಪ್ರವೇಶಿಸುತ್ತಿವೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ನಗರ ನಕ್ಸಲರ ಗ್ಯಾಂಗ್ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:
ಜಾಗತಿಕ ಮಟ್ಟದಲ್ಲಿ ಯುದ್ಧದ ಆತಂಕ, ಆರ್ಥಿಕ ಅನಿಶ್ಚಿತತೆ ಮತ್ತು ಪಶ್ಚಿಮ ಏಷ್ಯಾದ ಬಿಕ್ಕಟ್ಟುಗಳ ನಡುವೆಯೂ ಭಾರತೀಯರು ಸ್ಥಿರತೆಯ ಪರ ಮತ ನೀಡಿದ್ದಾರೆ ಎಂದು ಪ್ರಧಾನಿ ಹೇಳಿದರು. ಈ ಫಲಿತಾಂಶ ದೇಶದ ಒಗ್ಗಟ್ಟು ಮತ್ತು ದೃಢ ನಾಯಕತ್ವದ ಮೇಲಿನ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ ಎಂದರು.
ಇದೇ ವೇಳೆ ಮಹಿಳಾ ಸಬಲೀಕರಣದ ವಿಚಾರ ಪ್ರಸ್ತಾಪಿಸಿದ ಮೋದಿ, ಮಹಿಳಾ ಮೀಸಲಾತಿ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸಿದ ಪಕ್ಷಗಳಿಗೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದು ಟೀಕಿಸಿದರು. ಮಹಿಳೆಯರ ರಾಜಕೀಯ ಪಾಲ್ಗೊಳ್ಳುವಿಕೆಯನ್ನು ದೇಶದ ಭವಿಷ್ಯದ ಶಕ್ತಿಯಾಗಿ ಬಣ್ಣಿಸಿದರು.



