May 5, 2026
Tuesday, May 5, 2026
spot_img

ಶೃಂಗೇರಿ ಶಾಸಕ ಜೀವರಾಜ್ ಮೇಲಿನ ಎಫ್ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿರುವ ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ಸಂಬಂಧ ಶಾಸಕ ಜೀವರಾಜ್ ಮೇಲೆ ದಾಖಲಾಗಿದ್ದ ಎಫ್ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಅಂಚೆ ಮತಗಳನ್ನು ತಿರುಚಿದ್ದಾರೆ ಎಂದು ಆರೋಪದ ಮೇಲೆ ಶೃಂಗೇರಿ ಶಾಸಕ ಜೀವರಾಜ್ ಮೇಲೆ ಎಫ್ಐಆರ್‌ ದಾಖಲಾಗಿತ್ತು. ಈ ಸಂಬಂಧ ಪ್ರಕರಣ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀಶಾನಂದ ಅವರ ರಜಾಕಾಲದ ಪೀಠ, ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿ, 2023ರ ಘಟನೆಗೆ ಈಗ ಎಫ್ಐಆರ್‌ ಯಾಕೆ? ಈ ಕುರಿತು ಕೋರ್ಟ್ ಗೆ ಸೂಕ್ತ ಮಾಹಿತಿ ನೀಡಿದೆ ಹೇಗೆ ಎಫ್ಐಆರ್‌ ಮಾಡಿದ್ದೀರಿ ಎಂದು ಪ್ರಶ್ನಿಸಿದರು.

2023ರಲ್ಲಿದ್ದ ಜಿಲ್ಲಾಧಿಕಾರಿಗಳ ಮೇಲೆ ಎಫ್ಐಆರ್‌ ಯಾಕೆ? ಈಗಿನ ಚುನಾವಣಾಧಿಕಾರಿ ಮೇಲೆ ಮಾಡಿಲ್ಲವೇ? ಈ ರೀತಿ ರಾಜಕೀಯ ಪ್ರಭಾವಕ್ಕೆ ಒಳಗಾಗಿ ಪೊಲೀಸರು ಎಫ್ಐಆರ್‌ ಮಾಡಬಾರದು. ಹೈಕೋರ್ಟ್ ಆದೇಶದ ಮೇಲೆ ಅಂಚೆ ಮತಗಳ ಎಣಿಕೆ ನಡೆಸಲಾಗಿದೆ ಎಂದು ನ್ಯಾಯಾಧೀಶರು ಎಸ್‌ಪಿಪಿ ಬೆಳ್ಳಿಯಪ್ಪ ಮೇಲೆ ಅಸಮಾಧಾನ ಹೊರಹಾಕಿದರು.

ಪ್ರಜಾಪ್ರತಿನಿಧಿ ಕಾಯ್ದೆಯಡಿ ಜಿಲ್ಲಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗದು. ಈ ಸಂಬಂಧ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ತಡೆ ನೀಡಿ, ಮೇ 7ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !