ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. 15 ನಿಮಿಷಗಳಿಂದ ರೈಲುಗಳು ನಿಂತಲ್ಲೇ ನಿಂತಿದ್ದು, ಸಾವಿರಾರು ಪ್ರಯಾಣಿಕರು ಪರದಾಡಿದರು.
ವಿದ್ಯುತ್ ವ್ಯತ್ಯಯದಿಂದ ನೇರಳೆ ಮಾರ್ಗದ ಕುಂದಲಹಳ್ಳಿ ಸ್ಟೇಷನ್ನಲ್ಲಿ ಮೆಟ್ರೋ ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು, ಇದರಿಂದ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ಮೆಟ್ರೋ ರೈಲು ನಿಗಮ, ವಿದ್ಯುತ್ ಪೂರೈಕೆಯಲ್ಲಿನ ತಾಂತ್ರಿಕ ದೋಷದಿಂದಾಗಿ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಶೀಘ್ರದಲ್ಲೇ ಸಮಸ್ಯೆಯನ್ನು ಸರಿಪಡಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದೆ.



