September 11, 2026
Friday, September 11, 2026
spot_img

ಬಿಜೆಪಿ ಶಾಸಕ ಬಿ.ಪಿ ಹರೀಶ್‌ ಬಂಧನಕ್ಕೆ ಅರೆಸ್ಟ್‌ ವಾರೆಂಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಾತಿನಿಂದನೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆ ಹರಿಹರ ಬಿಜೆಪಿ ಶಾಸಕ ಬಿ.ಪಿ ಹರೀಶ್‌ ಬಂಧನಕ್ಕೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ವಾರೆಂಟ್‌ ಹೊರಡಿಸಿದ್ದು, ಬಂಧನದ ಭೀತಿ ಎದುರಾಗಿದೆ.

ಹರಿಹರ ಟೌನ್‌ ಠಾಣೆಯಲ್ಲಿ ಜಾತಿನಿಂದನೆ ಕೇಸ್‌ ದಾಖಲಾಗಿದ್ದು, ಇದೀಗ ಕೋರ್ಟ್‌ ಅರೆಸ್ಟ್‌ ವಾರೆಂಟ್‌ ಜಾರಿ ಮಾಡಿದೆ. ಹರೀಶ್‌ ಯಾವುದೇ ವಿಚಾರಣೆಗೆ ಆಗಮಿಸದ ಕಾರಣ ಬೆಂಗಳೂರಿನ ಜನಪ್ರತಿನಿಧಿಗಳ ಜಡ್ಜ್‌ ಅರೆಸ್ಟ್‌ ವಾರೆಂಟ್‌ ಜಾರಿ ಮಾಡಿದ್ದಾರೆ. ಮೇ. 7ರಂದು ಕೋರ್ಟ್‌ಗೆ ಹಾಜರುಪಡಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ದಲಿತ ಸಮಾಜದ ಬಗ್ಗೆ ಹರೀಶ್‌ ಅವಹೇಳನಾಕಾರಿ ಮಾತುಗಳನ್ನು ಆಡಿದ್ದರು ಎಂದು ಹೇಳಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !