August 23, 2026
Sunday, August 23, 2026
spot_img

ಮೇ 10ರಂದು ಬೆಂಗಳೂರಿಗೆ ‘ನಮೋ’ ಎಂಟ್ರಿ: ಶ್ರೀ ರವಿಶಂಕರ್ ಗುರೂಜಿ ಜನ್ಮದಿನೋತ್ಸವದಲ್ಲಿ ಭಾಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇದೇ ಮೇ 10 ರಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ವಿಶ್ವವಿಖ್ಯಾತ ಆಧ್ಯಾತ್ಮಿಕ ಸಂಸ್ಥೆ ‘ಆರ್ಟ್ ಆಫ್ ಲಿವಿಂಗ್’ನ ಸ್ಥಾಪಕರು ಹಾಗೂ ಆಧ್ಯಾತ್ಮಿಕ ಗುರುಗಳಾದ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ವರ್ಷದ ಜನ್ಮದಿನದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿಗಳು ಪಾಲ್ಗೊಳ್ಳಲಿದ್ದಾರೆ.

ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಈ ಭವ್ಯ ಸಮಾರಂಭ ಆಯೋಜನೆಯಾಗಿದ್ದು, ಇದೇ ವೇಳೆ ಸಂಸ್ಥೆಯ 45ನೇ ವರ್ಷಾಚರಣೆಯೂ ನಡೆಯಲಿದೆ. ಈ ಐತಿಹಾಸಿಕ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಆಶ್ರಮದ ಆವರಣದಲ್ಲಿ ನಿರ್ಮಾಣಗೊಂಡಿರುವ ಅತ್ಯಾಧುನಿಕ ಹಾಗೂ ಕಲಾತ್ಮಕ ನೂತನ ಧ್ಯಾನ ಮಂದಿರವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಈ ಭೇಟಿಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಸಂಚಾರ ವ್ಯವಸ್ಥೆಯಲ್ಲೂ ಕೆಲವು ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !