May 6, 2026
Wednesday, May 6, 2026
spot_img

ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗಾಗಿ ಕಲಬುರಗಿ–ದಾಂಡೇಲಿ ಮಧ್ಯೆ ಬಸ್ ಸಂಚಾರ ಆರಂಭ

ಹೊಸದಿಗಂತ ವರದಿ ಕಲಬುರಗಿ:

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ–1ರ ವ್ಯಾಪ್ತಿಯ ಕಲಬುರಗಿ ಘಟಕ–1ರಿಂದ ಕಲಬುರಗಿಯಿಂದ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಗೆ ಪ್ರೇಕ್ಷಣಿಯ ಸ್ಥಳಗಳ ವೀಕ್ಷಣೆಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಮೇ 1ರಿಂದ ಕಲಬುರಗಿ–ದಾಂಡೇಲಿ ನಾನ್ ಎಸಿ ಸ್ಲೀಪರ್ ಬಸ್ ಪ್ರಾರಂಭಿಸಿ ಕಾರ್ಯಾಚರಣೆ ಮಾಡಲಾಗುತ್ತಿದೆ.

ಈ ಬಸ್ ಜೇವರ್ಗಿ, ಶಹಾಪುರ, ಲಿಂಗಸೂಗುರು, ಕುಷ್ಟಗಿ, ಗದಗ, ಹುಬ್ಬಳ್ಳಿ, ಧಾರವಾಡ ಮಾರ್ಗವಾಗಿ ಸಂಚರಿಸುತ್ತದೆ. ಕಲಬುರಗಿ ಬಸ್ ನಿಲ್ದಾಣದಿಂದ ರಾತ್ರಿ 10 ಗಂಟೆಗೆ ಹೊರಟು ಬೆಳಿಗ್ಗೆ 8.30ಕ್ಕೆ ದಾಂಡೇಲಿ ತಲುಪಲಿದೆ. ದಾಂಡೇಲಿ ಬಸ್ ನಿಲ್ದಾಣದಿಂದ ಸಂಜೆ 6.30ಕ್ಕೆ ಹೊರಟು ಬೆಳಿಗ್ಗೆ 5 ಗಂಟೆಗೆ ಕಲಬುರಗಿ ತಲುಪಲಿದೆ.

ಪ್ರಯಾಣಿಕರು ಸಾರಿಗೆಯ ಸದುಪಯೋಗ ಪಡೆದುಕೊಳ್ಳುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಲಬುರಗಿ ವಿಭಾಗ–1ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೋರಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !