ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಡಿ.ಎನ್ ಜೀವರಾಜ್ ಅಧಿಕೃವಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಸ್ಪೀಕರ್ ಯು.ಟಿ ಖಾದರ್ ಅವರು ಪ್ರಮಾಣ ವಚನ ಬೋಧಿಸಿದರು. ಜೀವರಾಜ್ ಅವರು ಶೃಂಗೇರಿ ಶಾರದಾಂಬೆಯ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಈ ವೇಳೆ ವಿಪಕ್ಷ ನಾಯಕ ಆರ್.ಅಶೋಕ್, ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಭಾಗಿಯಾಗಿದ್ದರು.
ಇದಕ್ಕೂ ಮುನ್ನ ಪ್ರಮಾಣ ವಚನ ಸ್ವೀಕಾರ ಕುರಿತಾಗಿ ಗೊಂದಲಗಳು ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಮಾಡಿತ್ತು. ಇದರ ಬೆನ್ನಲ್ಲೇ ಬೆಂಗಳೂರಿಗೆ ಆಗಮಿಸಿದ ಸ್ಪೀಕರ್ ಯು.ಟಿ ಖಾದರ್ ಅವರು ನೂತನ ಶಾಸಕ ಡಿ.ಎನ್ ಜೀವರಾಜ್ ಅವರಿಗೆ ಪ್ರಮಾಣ ವಚ ಬೋಧಿಸಿದರು.



