May 6, 2026
Wednesday, May 6, 2026
spot_img

ಜೀವರಾಜ್ ಪ್ರಮಾಣವಚನ ಸ್ವೀಕಾರಕ್ಕೆ ತನ್ನಿಂದ ವಿಳಂಬವಾಗಿಲ್ಲ: ಸ್ಪೀಕರ್ ಯು.ಟಿ.ಖಾದರ್

ಹೊಸ ದಿಗಂತ ವರದಿ, ಮಂಗಳೂರು:

ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಜೀವರಾಜ್ ಅವರ ಪ್ರಮಾಣವಚನ ಸ್ವೀಕಾರಕ್ಕೆ ತನ್ನಿಂದ ಯಾವುದೇ ವಿಳಂಬವಾಗಿಲ್ಲ. ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲೇ ಕಾರ್ಯನಿರ್ವಹಿಸಬೇಕಾದ ಜವಾಬ್ದಾರಿ ನನ್ನ ಮೇಲಿದ್ದು, ಅದರಂತೆ ನಡೆದುಕೊಂಡಿದ್ದೇನೆ ಎಂದು ವಿಧಾನ ಸ್ಪೀಕರ್ ಯು.ಟಿ.ಖಾದರ್ ಸ್ಪಷ್ಟಪಡಿಸಿದ್ದಾರೆ.

ಮಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮತ್ತು ಸಂಸದೀಯ ವ್ಯವಸ್ಥೆಯು ವಿಶ್ವಾಸದ ಮೇಲೆ ನಡೆಯಬೇಕು. ವಿಶ್ವಾಸವಿಲ್ಲದಿದ್ದರೆ ವ್ಯವಸ್ಥೆ ಬಲಿಷ್ಠವಾಗಲು ಸಾಧ್ಯವಿಲ್ಲ ಎಂದರು.

ಜೀವರಾಜ್ ಅವರು ಮಂಗಳವಾರ ಪೂರ್ವಾಹ್ನ 11 ಗಂಟೆಗೆ ಅರ್ಜಿ ನೀಡಿದ್ದಾರೆ. ನಿಯಮಾವಳಿ ಪ್ರಕಾರ ಅಭಿಪ್ರಾಯ ಪಡೆದು ಸಮಯ ನೀಡಲಾಗುತ್ತದೆ. ಅಷ್ಟರಲ್ಲೇ ವಿಳಂಬವಾಗಿದೆ ಎನ್ನುವುದು ಸರಿಯಲ್ಲ. ಸಂವಿಧಾನ ಮತ್ತು ಕಾನೂನಿನಡಿ ಅವಕಾಶ ಕೊಡಲೇಬೇಕು. ಇದೊಂದು ವಿಶಿಷ್ಟ ಸನ್ನಿವೇಶ. ವಿಳಂಬ ಮಾಡುವ ಉದ್ದೇಶವೇ ಇಲ್ಲ. ಆದರೆ ಸಂವಿಧಾನ ಪೀಠದ ಬಗ್ಗೆ ಸಂಶಯ, ತಪ್ಪು ಅಭಿಪ್ರಾಯ ಬರುವ ರೀತಿಯಲ್ಲಿ ಚರ್ಚಿಸುವುದು, ಹೇಳಿಕೆ ನೀಡುವುದು ಸರಿಯಲ್ಲ. ರಾಜ್ಯಪಾಲರು ಕರೆ ಮಾಡಿ ಮಾತನಾಡಿದ್ದು, ವಿಳಂಬ ಆಗಿಲ್ಲ ಎಂಬುದನ್ನು ಅವರಿಗೆ ಮನವರಿಕೆ ಮಾಡಲಾಗಿದೆ ಎಂದು ಸ್ಪೀಕರ್ ಖಾದರ್ ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !