May 6, 2026
Wednesday, May 6, 2026
spot_img

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ನನ್ನನ್ನು ವಜಾ ಮಾಡಲಿ: ಮಮತಾ ಬ್ಯಾನರ್ಜಿ ಸವಾಲ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪಂಚ ರಾಜ್ಯ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಎಲ್ಲಾ ರಾಜ್ಯಗಳಲ್ಲಿ ಹೊಸ ಸರಕಾರ ರಚನೆಗೆ ಸಿದ್ಧತೆ ನಡೆಯುತ್ತಿದ್ದರೆ, ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿದ್ದು, ಮುಖ್ಯಮಂತಿ ಸ್ಥಾನದಿಂದ ಕೆಳಗಿಳಿಯಲು ಮಮತಾ ಬ್ಯಾನರ್ಜಿ ಸಮ್ಮತಿಸುತ್ತಿಲ್ಲ.

ಬಂಗಾಳದಲ್ಲಿ 15 ವರ್ಷಗಳ ಬಳಿಕ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದರೆ ,ಅತ್ತ ತೃಣಮೂಲ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಇದರಿಂದ ತ್ರೀವ ನೊಂದಿರುವ ಮಮತಾ ಬ್ಯಾನರ್ಜಿ ಅವರು ತಮ್ಮ ಸೋಲನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ. ಇದು ಬಲವಂತದ ಸೋಲು ಎಂದು ಕರೆದಿದ್ದಾರೆ.

ಶಾಸಕಾಂಗ ಪಕ್ಷದ ಸಭೆ ನಡೆಸಿ ಈ ಕುರಿತು ಮಾತನಾಡಿದ ಮಮತಾ ಬ್ಯಾನರ್ಜಿ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ಬೇಕಿದ್ದರೆ ನನ್ನನ್ನು ವಜಾ ಮಾಡಲಿ ಎಂದು ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಚುನಾವಣೆಯಲ್ಲಿ ನನ್ನನ್ನು ಬಲವಂತವಾಗಿ ಸೋಲಿಸಿದ್ದಾರೆ. ಚುನಾವಣಾ ಆಯೋಗ ಮತ್ತು ಕೇಂದ್ರ ಪಡೆಗಳು ಸೇರಿಕೊಂಡು ಬಿಜೆಪಿಯ ಪರವಾಗಿ ಕೆಲಸ ಮಾಡಿವೆ ಎಂದು ಆರೋಪಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !