May 7, 2026
Thursday, May 7, 2026
spot_img

WEATHER | ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಗುಡುಗು ಸಹಿತ ಮಳೆ: 4 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಆಲಿಕಲ್ಲು ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ 4 ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗಲಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಶುಷ್ಕ ವಾತಾವರಣವಿರಲಿದೆ.

ಧಾರವಾಡ, ಹಾವೇರಿ, ಗದಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ನಿರೀಕ್ಷೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.

ಬೀದರ್, ಕಲಬುರ್ಗಿ, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ 6 ಜಿಲ್ಲೆಗಳನ್ನು ಹೊರತುಪಡಿಸಿ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು ‘ಯೆಲ್ಲೋ ಅಲರ್ಟ್’ ಜಾರಿಯಲ್ಲಿರಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !