May 7, 2026
Thursday, May 7, 2026
spot_img

ಶೃಂಗೇರಿ ಕ್ಷೇತ್ರದ ಮತಪತ್ರಗಳಲ್ಲಿ ಅಕ್ರಮ ಆರೋಪ: ಡಿ.ಎನ್. ಜೀವರಾಜ್ ಸಹಿತ ಮೂವರ ವಿರುದ್ಧದ ಅರ್ಜಿ ವಿಚಾರಣೆಗೆ ಹೈಕೋರ್ಟ್ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತಪತ್ರಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಅರ್ಜಿಗಳ ವಿಚಾರಣೆಗೆ ಹೈಕೋರ್ಟ್ ಜೂನ್ 3ರವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಮತಪತ್ರಗಳಲ್ಲಿ ಅಕ್ರಮ ಎಸೆಯಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೊಳ್ಳಿ ಅವರು ಡಿ.ಎನ್. ಜೀವರಾಜ್, ಕೆ.ಎನ್. ರಮೇಶ್ ಹಾಗೂ ವೇದಮೂರ್ತಿ ಅವರ ವಿರುದ್ಧ ದೂರು ದಾಖಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಪೀಠವು, ಜೂನ್ 3ರವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.

ದೂರುದಾರ ಸುಧೀರ್ ಕುಮಾರ್ ಪರ ವಕೀಲರು ಮನವಿ ಸಲ್ಲಿಸಿ, ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ. ಈ ಸಂಬಂಧ ನ್ಯಾಯಾಲಯವು ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ನೀಡಿ, ವಿಚಾರಣೆಯನ್ನು ಮುಂದೂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !