May 7, 2026
Thursday, May 7, 2026
spot_img

SIT ಕೈಸೇರಿದ ಚಂದ್ರನಾಥ್ ರಥ್ ಹ*ತ್ಯೆ ಪ್ರಕರಣ: ಹಂತಕರಿಗಾಗಿ ಹುಡುಕಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಚುರುಕುಗೊಂಡಿದೆ.

ಪ್ರಕರಣದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದು, ಐಜಿ ಹುದ್ದೆಯ ಹಿರಿಯ ಅಧಿಕಾರಿ ನೇತೃತ್ವದಲ್ಲಿ ತನಿಖೆ ಮುಂದುವರಿಯುತ್ತಿದೆ.

ಉತ್ತರ 24 ಪರಗಣದ ಮಧ್ಯಮಗ್ರಾಮ್ ಪ್ರದೇಶದಲ್ಲಿ ತಡರಾತ್ರಿ ಈ ದಾಳಿ ನಡೆದಿದೆ. ಕೊಲ್ಕತ್ತಾದಿಂದ ಮನೆಗೆ ಮರಳುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ರಥ್ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಎದೆ, ಹೊಟ್ಟೆ ಮತ್ತು ಮುಖ ಭಾಗಕ್ಕೆ ಗುಂಡು ತಗುಲಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಚಾಲಕನಿಗೂ ಗಾಯಗಳಾಗಿದ್ದು, ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:

ಪ್ರಾಥಮಿಕ ತನಿಖೆಯಲ್ಲಿ 7.6 ಬೋರ್ ಸೆಮಿ-ಆಟೋಮ್ಯಾಟಿಕ್ ಪಿಸ್ತೂಲ್ ಬಳಸಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಹಲವು ಗುಂಡೇಟಿನ ಗಾಯಗಳು ಪತ್ತೆಯಾಗಿವೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಸುಳಿವು ಹುಡುಕಲಾಗುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಕೆಲ ಶಂಕಿತರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಮುಖ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ. ಹೊಸ ಸರ್ಕಾರದ ಪ್ರಮಾಣ ವಚನಕ್ಕೂ ಮುನ್ನ ನಡೆದ ಈ ಹತ್ಯೆ ಬಂಗಾಳ ರಾಜಕೀಯದಲ್ಲಿ ಮತ್ತಷ್ಟು ಉದ್ವಿಗ್ನತೆ ಹೆಚ್ಚಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !