May 7, 2026
Thursday, May 7, 2026
spot_img

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ವಿನಯ್ ಕುಲಕರ್ಣಿ: ವಿಚಾರಣೆ ಮುಂದೂಡಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ ಮರು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮೇ 26ಕ್ಕೆ ಮುಂದೂಡಿದೆ.

ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರು ಪ್ರಮುಖ ಆರೋಪಿ ಎಂದು ಗುರುತಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಏಪ್ರಿಲ್ 17ರಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

ಇದೀಗ ವಿಶೇಷ ನ್ಯಾಯಾಲಯ ನೀಡಿದ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಶಿಕ್ಷೆಗೆ ತಡೆ ನೀಡಬೇಕು ಮತ್ತು ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಕೋರಿದ್ದಾರೆ. ಈ ಅರ್ಜಿಯ ಪ್ರಾಥಮಿಕ ವಿಚಾರಣೆ ನಡೆಸಿದ ಕೋರ್ಟ್, ಮುಂದಿನ ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !