ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಹವಾಮಾನ ವೈಪರೀತ್ಯ ಮುಂದುವರಿದಿದ್ದು, ಒಂದು ಕಡೆ ತೀವ್ರ ಬಿಸಿಲು ಕಾಡುತ್ತಿದ್ದರೆ ಮತ್ತೊಂದು ಕಡೆ ಹಲವು ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆ ಮೂಡಿದೆ.
ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಕೆಲವು ಭಾಗಗಳಲ್ಲಿ ಉಷ್ಣಾಂಶ ತೀವ್ರ ಏರಿಕೆಯಾಗಲಿದ್ದು, ರಾಜ್ಯದ ಹಲವೆಡೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ವಿಜಯಪುರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್ ತನಕ ಏರಿಕೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಕಾರಣ ಜನರು ಎಚ್ಚರಿಕೆಯಿಂದಿರಬೇಕು ಎಂದು ಸೂಚಿಸಲಾಗಿದೆ.
ಇದನ್ನೂ ಓದಿ:
ಇನ್ನೊಂದೆಡೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಉಷ್ಣಾಂಶ 32 ಡಿಗ್ರಿ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.



