May 7, 2026
Thursday, May 7, 2026
spot_img

ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ: ಸಂಸದ ಯದುವೀರ್ ಒಡೆಯರ್ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಭಿವೃದ್ಧಿ ಹೆಸರಿನಲ್ಲಿ ಯಾವುದೇ ಕಾರಣಕ್ಕೂ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಮೈಸೂರು-ಬೆಂಗಳೂರು ಹೊರವರ್ತುಲ ರಸ್ತೆ ಬಳಿ ಇಂದು ಮೇಲ್ಸೇತುವೆ ಕಾಮಗಾರಿಗೂ ಮುನ್ನ ಸ್ಥಳ ಪರಿಶೀಲನೆ ನಡೆಸಿದ ಅವರು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಇದನ್ನೂ ಓದಿ:

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಗರದ ರಸ್ತೆ ಒತ್ತಡ ಕಡಿಮೆ ಮಾಡಲು ಮೈಸೂರು ಜಿಲ್ಲೆಯ ವಿವಿಧೆಡೆ ಸುಮಾರು 700 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ಸೇತುವೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕಾಮಗಾರಿ ಆರಂಭಿಸುವ ಮುನ್ನ ಗಿಡ-ಮರಗಳ ರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ” ಎಂದರು.

“ಈ ಮೇಲ್ಸೇತುವೆ ಯೋಜನೆಯ ವ್ಯಾಪ್ತಿಯಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ 150ಕ್ಕೂ ಹೆಚ್ಚು ಮರಗಳು ಕಂಡುಬಂದಿವೆ. ಯಾವುದೇ ಕಾರಣಕ್ಕೂ ಈ ಮರಗಳನ್ನು ಕಡಿಯುವುದಿಲ್ಲ. ಶೇಕಡ 90 ರಷ್ಟು ಮರಗಳನ್ನು ಸ್ಥಳದಲ್ಲೇ ಉಳಿಸಲು ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಪರಿಸರವಾದಿಗಳು ಆತಂಕಪಡುವ ಅಗತ್ಯವಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !