May 7, 2026
Thursday, May 7, 2026
spot_img

ಇಂಡಿ ಒಕ್ಕೂಟಕ್ಕೆ ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಬಸವರಾಜ ಬೊಮ್ಮಾಯಿ

ಹೊಸದಿಗಂತ ವರದಿ ಹಾವೇರಿ:

ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಹೀನಾಯವಾಗಿ ಸೋತರೂ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡದೇ ಭಂಡತನ ತೋರುತ್ತಿರುವ ಮಮತಾ ಬ್ಯಾನರ್ಜಿಗೆ ಬೆಂಬಲ ಕೊಡುತ್ತಿರುವ ಇಂಡಿ ಒಕ್ಕೂಟಕ್ಕೆ ಸಂವಿಧಾನ, ಪ್ರಜಾಪಭುತ್ವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪ್ರತಿಯೊಂದರಲ್ಲೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿದೆ. ಅವರು ಸಂವಿಧಾನದ ಪ್ರಕಾರ ಮಹಿಳೆಯರು, ಬಡವರು, ಸಾಮಾನ್ಯ ಜನರನ್ನು ರಕ್ಷಣೆ ಮಾಡಿಲ್ಲ. ಈಗ ಟಿಎಂಸಿ ಚುನಾವಣೆಯಲ್ಲಿ ಹೀನಾಯ ಸೋಲು ಕಂಡರೂ, ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಭಂಡತನ ತೋರುತ್ತಿದ್ದು, ಅವರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟುಕೊಂಡಿಲ್ಲ. ಅವರು ಯಾವಾಗಲೂ ಸರ್ವಾಧಿಕಾರದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ:

ಅದು ಈಗ ಬಹಿರಂಗಗೊಂಡಿದೆ. ಆದ್ದರಿಂದ ಮಮತಾ ಬ್ಯಾನರ್ಜಿಗೆ ಬೆಂಬಲ ಕೊಡುತ್ತಿರುವ ಇಂಡಿ ಒಕ್ಕೂಟಕ್ಕೆ ಸಂವಿಧಾನ, ಪ್ರಜಾಪಭುತ್ವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !