ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಬಿರುಗಾಳಿಗೆ ಸಿಲುಕಿದ್ದು, ಪೈಲಟ್‌ನ ಸಮಯಪ್ರಜ್ಞೆಯಿಂದ ತಕ್ಷಣ ಸುರಕ್ಷಿತವಾಗಿ ಲ್ಯಾಂಡಿಂಗ್ ನಡೆಸಲಾಯಿತು.
ಥಾಣೆ ಗ್ರಾಮೀಣ ಪ್ರದೇಶದಲ್ಲಿ ಬಿರುಗಾಳಿಯಿಂದಾಗಿ ತಾಂತ್ರಿಕ ಸಂವಹನದ ಅಡಚಣೆ ಉಂಟಾಗಿದ್ದು, ಇದರಿಂದ ಹೆಲಿಕಾಪ್ಟರ್ ಮಾರ್ಗ ಗೊಂದಲ ಉಂಟಾಗಿತ್ತು. ಈ ವೇಳೆ ಪರಿಸ್ಥಿತಿಯನ್ನು ಗಮನಿಸಿದ ಪೈಲಟ್ ತಕ್ಷಣವೇ ಸುರಕ್ಷಿತ ಮಾರ್ಗದರ್ಶನದ ಮೂಲಕ ಯಶಸ್ವಿಯಾಗಿ ಲ್ಯಾಂಡ್ ಮಾಡಿದ್ದಾರೆ.
ಮಹಾಲಕ್ಷ್ಮಿ ರೇಸ್‌ಕೋರ್ಸ್ ಹೆಲಿಪ್ಯಾಡ್‌ನಿಂದ ಏಕನಾಥ್ ಶಿಂಧೆ ಅವರು ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಮುರ್ಬಾದ್ ಕಡೆಗೆ ತೆರಳುತ್ತಿದ್ದರು. ಆದರೆ, ಹೆಲಿಕಾಪ್ಟರ್ ಐರೋಲಿ ಪ್ರದೇಶವನ್ನು ದಾಟಿದ ಸ್ವಲ್ಪ ಸಮಯದಲ್ಲೇ ಹವಾಮಾನ ಪರಿಸ್ಥಿತಿ ಹದಗೆಡಲು ಪ್ರಾರಂಭಿಸಿತು. ಇದರಿಂದಾಗಿ ತಕ್ಷಣ ಎಚ್ಚೆತ್ತುಕೊಂಡ ಪೈಲಟ್ ಹೆಲಿಕಾಪ್ಟರ್ ಅನ್ನು ಲ್ಯಾಂಡ್ ಮಾಡಿದ್ದಾರೆ. ಈ ಘಟನೆಯಲ್ಲಿ ಹೆಲಿಕಾಪ್ಟರ್ ನಲ್ಲಿದ್ದ ಎಲ್ಲರೂ ಸುರಕ್ಷಿತರಾಗಿದ್ದಾರೆ.



