May 7, 2026
Thursday, May 7, 2026
spot_img

ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಮನೆಗೆ ಮಹಾಲಕ್ಷ್ಮಿ ಆಗಮನ: ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ ದೆವಿಶಾ ಶೆಟ್ಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಮ್ ಇಂಡಿಯಾ ಆಟಗಾರ ಸೂರ್ಯ ಕುಮಾರ್ ಯಾದವ್ ಅವರ ಮನೆಯಲ್ಲಿ ಸಂಭ್ರಮ ಮನೆಮಾಡಿದೆ. ಪತ್ನಿ ದೇವಿಶಾ ಶೆಟ್ಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಈ ಕುರಿತು ಖುಷಿ ಹಂಚಿಕೊಂಡ ಸೂರ್ಯಕುಮಾರ್, ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮಗುವಿನ ಪುಟ್ಟ ಕೈಯನ್ನು ಹಿಡಿದಿರುವ ಫೋಟೋ ಹಂಚಿಕೊಂಡಿದ್ದಾರೆ. ಜೊತೆಗೆ ನಗು, ಸಂಭ್ರಮ ಮತ್ತು ಕನಸುಗಳೊಂದಿಗೆ ನಮ್ಮ ಪುಟ್ಟ ಮಗಳನ್ನು ಸ್ವಾಗತಿಸುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿ ತಿಳಿಯುತ್ತಿದ್ದಂತೆ ಕ್ರಿಕೆಟ್ ಲೋಕದ ಗಣ್ಯರು, ಅಭಿಮಾನಿಗಳು ಶುಭಾಶಯಗಳ ಮಳೆ ಸುರಿಸಿದ್ದಾರೆ. ಸೂರ್ಯ ಹಾಗೂ ದೇವಿಶಾ ಶೆಟ್ಟಿ 2016ರಲ್ಲಿ ವಿವಾಹವಾಗಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !