September 10, 2026
Thursday, September 10, 2026
spot_img

ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ ಪರಿಷತ್ ಸದಸ್ಯ ಎಚ್. ವಿಶ್ವನಾಥ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನು ಮುಂದೆ ನಾನು ಯಾವುದೇ ಚುನಾವಣೆಗೂ ಸ್ಪರ್ಧಿಸುವುದಿಲ್ಲ. ಈ ಮೂಲಕ ಚುನಾವಣಾ ರಾಜಕೀಯಕ್ಕೆ ನಾನು ವಿದಾಯ ಹೇಳುತ್ತಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಹಲವು ಬಾರಿ ಚುನಾವಣೆಯಲ್ಲಿ ನಿಲ್ಲಲು ನಿರ್ಧರಿಸಿದಾಗ ಜನರು ಹಣ ನೀಡಿ ಆಶೀರ್ವಾದ ಮಾಡುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ಹಣ ಕೊಟ್ಟು ಚುನಾವಣೆಯಲ್ಲಿ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇಂದಿನ ಪರಿಸ್ಥಿತಿಯಲ್ಲಿ 50 ಕೋಟಿ ರೂ. ಖರ್ಚು ಮಾಡುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಚುನಾವಣೆಯಿಂದ ಸ್ಪರ್ಧಿಸುವುದಿಲ್ಲ. ಆದರೆ ರಾಜಕೀಯದಲ್ಲಿ ಮುಂದುವರಿಯುತ್ತೇನೆ ಎಂದು ತಿಳಿಸಿದರು.

ಕೇವಲ ನಾನು ಮಾತ್ರವಲ್ಲ, ನನ್ನ ಮಕ್ಕಳು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರು ರಾಜಕೀಯದಲ್ಲಿ ಇರಲು ಬಯಸಿದರೆ ,ತಮ್ಮ ಶಕ್ತಿ ಅನುಸಾರ ಮುಂದುವರಿಯುತ್ತಾರೆ ಎಂದು ಎಚ್ ವಿಶ್ವನಾಥ್ ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !