ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾನುವಾರ ಬೆಳಿಗ್ಗೆ ನಮ್ಮ ಮೆಟ್ರೋ ಬಳಸುವ ಪ್ರಯಾಣಿಕರು ಪ್ರಯಾಣದ ಯೋಜನೆಯನ್ನು ಮುಂಚಿತವಾಗಿ ಮಾಡಿಕೊಂಡರೆ ಒಳಿತು. ಯಾಕೆ ಅನಂತ ಗೊತ್ತಗಾಗಬೇಕಾದ್ರೆ ಈ ಸ್ಟೋರಿ ಓದಿ.
ಅಗತ್ಯ ತಾಂತ್ರಿಕ ನಿರ್ವಹಣಾ ಕಾಮಗಾರಿಗಳ ಕಾರಣದಿಂದ ನೇರಳೆ ಮಾರ್ಗದ ಕೆಲ ಭಾಗಗಳಲ್ಲಿ ತಾತ್ಕಾಲಿಕವಾಗಿ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಈ ಕುರಿತು ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಯಾಣಿಕರಿಗೆ ಮುನ್ನೆಚ್ಚರಿಕೆ ಮಾಹಿತಿ ನೀಡಿದೆ.
ಮೇ 10ರಂದು ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವಿನ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ನಿಲ್ದಾಣಗಳ ಮಧ್ಯೆ ನಡೆಯಲಿರುವ ತುರ್ತು ನಿರ್ವಹಣಾ ಕಾಮಗಾರಿಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:
ಆದರೆ ಎಲ್ಲ ಮಾರ್ಗಗಳಲ್ಲೂ ಸೇವೆ ನಿಲ್ಲುವುದಿಲ್ಲ. ಚಲ್ಲಘಟ್ಟದಿಂದ ವಿಜಯನಗರದವರೆಗೆ, ಎಂ.ಜಿ. ರಸ್ತೆಯಿಂದ ವೈಟ್‌ಫೀಲ್ಡ್ ವರೆಗೆ ನೇರಳೆ ಮಾರ್ಗದ ಉಳಿದ ಭಾಗಗಳಲ್ಲಿ ಮೆಟ್ರೋ ಸಂಚಾರ ಎಂದಿನಂತೆ ಇರಲಿದೆ. ಜೊತೆಗೆ ಹಸಿರು ಮಾರ್ಗ ಮತ್ತು ಹಳದಿ ಮಾರ್ಗದ ಸೇವೆಯಲ್ಲೂ ಯಾವುದೇ ಬದಲಾವಣೆ ಇರುವುದಿಲ್ಲ.
ಬೆಳಿಗ್ಗೆ 9 ಗಂಟೆಯ ನಂತರ ಕಾಮಗಾರಿ ಪೂರ್ಣಗೊಂಡ ತಕ್ಷಣ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ಪುನರಾರಂಭವಾಗಲಿದೆ. ಈ ಅವಧಿಯಲ್ಲಿ ಪ್ರಯಾಣಿಸುವವರು ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಿಕೊಂಡು ಸಹಕರಿಸುವಂತೆ ಮೆಟ್ರೋ ಆಡಳಿತ ಮನವಿ ಮಾಡಿದೆ.



