September 11, 2026
Friday, September 11, 2026
spot_img

ದೆಹಲಿ vs ಕೋಲ್ಕತ್ತಾ ಮುಖಾಮುಖಿ: ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರತಿಷ್ಠಿತ ಐಪಿಎಲ್ 2026ರ ಟೂರ್ನಿಯು ಈಗ ಅತ್ಯಂತ ರೋಚಕ ಹಂತಕ್ಕೆ ಬಂದು ತಲುಪಿದೆ. ಲೀಗ್ ಹಂತದ 51ನೇ ಪಂದ್ಯದಲ್ಲಿ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸುತ್ತಿವೆ.

ಪಂದ್ಯದ ಆರಂಭದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಅಜಿಂಕ್ಯ ರಹಾನೆ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ದೆಹಲಿಯ ಪಿಚ್ ಬ್ಯಾಟಿಂಗ್‌ಗೆ ಪೂರಕವಾಗಿರುವುದರಿಂದ, ಚೇಸಿಂಗ್ ಮಾಡುವುದು ಸುಲಭ ಎಂಬ ಲೆಕ್ಕಾಚಾರದಲ್ಲಿ ಕೆಕೆಆರ್ ಈ ನಿರ್ಧಾರ ಕೈಗೊಂಡಿದೆ. ಅಕ್ಷರ್ ಪಟೇಲ್ ನೇತೃತ್ವದ ದೆಹಲಿ ತಂಡ ಮೊದಲು ಬ್ಯಾಟಿಂಗ್ ನಡೆಸಿ ಬೃಹತ್ ಮೊತ್ತ ಪೇರಿಸುವ ಗುರಿ ಹೊಂದಿದೆ.

ಪ್ಲೇಆಫ್ ರೇಸ್‌ನಿಂದ ಹೊರಬೀಳುವ ಭೀತಿಯಲ್ಲಿರುವ ಎರಡೂ ತಂಡಗಳಿಗೆ ಈ ಗೆಲುವು ಅನಿವಾರ್ಯವಾಗಿದೆ.

ದೆಹಲಿ ಕ್ಯಾಪಿಟಲ್ಸ್: ಪ್ರಸ್ತುತ 10 ಪಂದ್ಯಗಳಲ್ಲಿ 4 ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್: 9 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿ 8ನೇ ಸ್ಥಾನದಲ್ಲಿದೆ.

ಇಂದಿನ ಪಂದ್ಯದಲ್ಲಿ ಸೋಲುವ ತಂಡ ಪ್ಲೇಆಫ್ ರೇಸ್‌ನಿಂದ ಬಹುತೇಕ ಹೊರಬೀಳಲಿದೆ. ಹೀಗಾಗಿ, ಎರಡೂ ತಂಡಗಳ ಪಾಲಿಗೆ ಇದು ‘ಮಾಡು ಇಲ್ಲವೇ ಮಡಿ’ ಪಂದ್ಯವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !