ಹೊಸದಿಗಂತ ವರದಿ ಮಂಡ್ಯ:
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಕಾರು ಪಲ್ಟಿಯಾಗಿ ತಂದೆ-ಮಗ ಮೃತಪಟ್ಟಿರುವ ಘಟನೆ ತಾಲೂಕಿನ ಪಣಕನಹಳ್ಳಿ ಬಳಿ ಶುಕ್ರವಾರ ಸಂಜೆ ನಡೆದಿದೆ.
ತಾಲೂಕಿನ ಕಚ್ಚೀಗೆರೆ ಗ್ರಾಮದ ನಿವಾಸಿ ಕಿರಣ್ (40), ಪುತ್ರ ಕಿಶೋರ್ (13) ಮೃತರು. ಪುತ್ರಿ ಕೀರ್ತನಾ (10) ಅವರು ಗಾಯಗೊಂಡಿದ್ದು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:
ಆಲ್ಟೋ ಕಾರಿನಲ್ಲಿ ಪಾಂಡವಪುರಕ್ಕೆ ತೆರಳಿದ್ದ ಮೂವರು, ಕಚ್ಚೀಗೆರೆ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಪಣಕನಹಳ್ಳಿ ಬಳಿ ಚಾಲಕನ ನಿಯಂತ್ರಣದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಮೈಸೂರು ಮಾರ್ಗದ ರಸ್ತೆಯಲ್ಲಿ ಮಗುಚಿ ಬಿದ್ದಿದೆ.
ತೀವ್ರ ಗಾಯಗೊಂಡ ತಂದೆ-ಮಗ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಶವಗಳನ್ನು ನೀಡಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಡಾ. ವಿ.ಜೆ. ಶೋಭಾರಾಣಿ, ಎಎಸ್ಪಿ ತಿಮ್ಮಯ್ಯ, ಸೆಂಟ್ರಲ್ ಠಾಣೆಯ ಪಿಎಸ್‌ಐ ಸುನಿಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದರು. ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.



