ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂದಿನ ಬಹುನಿರೀಕ್ಷಿತ ಚಿತ್ರ ‘ರಾಮಾಯಣ’ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಚಿತ್ರದಲ್ಲಿ ರಣಬೀರ್ ಕಪೂರ್ ಮತ್ತು ಯಶ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದು, ನಿತೇಶ್ ತಿವಾರಿ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಮುಂಬೈನ ಫಿಲ್ಮ್ ಸಿಟಿಯಲ್ಲಿ ಹಾಕಲಾದ ಅಯೋಧ್ಯೆಯ ಬೃಹತ್ ಸೆಟ್‌ನಲ್ಲಿ ಸೀತಾ ಸ್ವಯಂವರದ ದೃಶ್ಯಗಳ ಚಿತ್ರೀಕರಣದಲ್ಲಿ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಈ ದೃಶ್ಯದಲ್ಲಿ ಯಶ್ ‘ಲಂಕಾಧಿಪತಿ ರಾವಣ’ನಾಗಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಸೀತಾ ಸ್ವಯಂವರದಲ್ಲಿ ಶಿವಧನಸ್ಸನ್ನು ಎತ್ತಲು ಬರುವ ರಾವಣನ ಅಹಂಕಾರ ಮತ್ತು ವೈಭವದ ದೃಶ್ಯಗಳನ್ನು ಅದ್ಧೂರಿಯಾಗಿ ಸೆರೆಹಿಡಿಯಲಾಗಿದೆ.
ಈ ಚಿತ್ರದಲ್ಲಿ ಸೀತಾ ಮಾತೆಯ ಪಾತ್ರವನ್ನು ನಟಿ ಸಾಯಿ ಪಲ್ಲವಿ ನಿರ್ವಹಿಸುತ್ತಿದ್ದು, ಅವರೊಂದಿಗಿನ ದೃಶ್ಯಗಳು ಕೂಡ ಈಗಾಲೇ ಚಿತ್ರೀಕರಣಗೊಂಡಿವೆ. ರಾಮಾಯಣ ಸಿನಿಮಾದ ಮೊದಲ ಭಾಗ ಈ ವರ್ಷ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾದರೆ, ಎರಡನೇ ಭಾಗ 2027ರ ದೀಪಾವಳಿಗೆ ರಿಲೀಸ್ ಆಗಲಿದೆ ಎಂದು ತಿಳಿದು ಬಂದಿದೆ.



