October 15, 2026
Thursday, October 15, 2026
spot_img

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ : ಎಚ್‌ಎಎಲ್, ನೈಸ್ ರಸ್ತೆಯಲ್ಲಿ ಸಂಚಾರ ನಿರ್ಬಂಧ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ನಾಳೆ ಬೆಂಗಳೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡುವ ಹಿನ್ನೆಲೆ, ಸಂಚಾರ ಪೊಲೀಸರು ಎಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಾರ ಸಲಹೆಯನ್ನು ನೀಡಿದ್ದಾರೆ.

ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಡಿಜಿಸಿಎ (DGCA) ಕಚೇರಿಯವರೆಗೆ ಎರಡೂ ಬದಿಗಳಲ್ಲಿ ಎಲ್ಲಾ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಹಾಗೂ ಅಂಬ್ರೆಲ್ಲಾ ಜಂಕ್ಷನ್‌ನಿಂದ ಗೇಟ್ 30 ರವರೆಗಿನ ಎರಡೂ ಬದಿಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಇನ್ನು, ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನೈಸ್ ರಸ್ತೆಯಲ್ಲಿ ಸಂಚಾರ ನಿರ್ಬಂಧವಿರುತ್ತದೆ ಎಂದು ತಿಳಿಸಿದ್ದಾರೆ. ಸಾರ್ವಜನಿಕರು ಈ ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.

Must Read