May 9, 2026
Saturday, May 9, 2026
spot_img

ವಿಜಯಪುರದಲ್ಲಿ ಹೃದಯವಿದ್ರಾವಕ ಘಟನೆ: ಕೆಲಸ ಮಾಡುವಾಗಲೇ ಆಯತಪ್ಪಿ ಬಿದ್ದು ಲೈನ್‌ಮೆನ್‌ ಸಾ*ವು

ಹೊಸದಿಗಂತ ವರದಿ ವಿಜಯಪುರ:

ರಾತ್ರಿ ಪಾಳಿ ಕೆಲಸ ಮಾಡುತ್ತಿದ್ದ ವೇಳೆ ಹೆಸ್ಕಾಂ ಕಚೇರಿ ಕಟ್ಟಡದ ಮೇಲಿಂದ ಆಯತಪ್ಪಿ ಕೆಳಗೆ ಬಿದ್ದು ಲೈನ್ ಮ್ಯಾನ್ ಮೃತಪಟ್ಟಿರುವ ಘಟನೆ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮದ ಮುತ್ತು ಹಣಮಂತ ಡಾಂಗೆ (35) ಮೃತ ವ್ಯಕ್ತಿ.

ಘಟನಾ ಸ್ಥಳಕ್ಕೆ ಸಿಂದಗಿ ಠಾಣೆ ಪೊಲೀಸ್ ರು ಭೇಟಿ ನೀಡಿ, ಪರಿಶೀಲಿಸಿದರು.

ಈ ದುರ್ಘಟನೆ ವಿಷಯ ತಿಳಿಯುತ್ತಿದ್ದಂತೆ ಮಾಜಿ ಶಾಸಕ ಶರಣಪ್ಪ ಸುಣಗಾರ ಸೇರಿದಂತೆ ಅನೇಕರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !