ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ ಮಹತ್ವದ ಹಂತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಕಾದಾಟ ಅಭಿಮಾನಿಗಳ ಗಮನ ಸೆಳೆದಿದೆ.
ನಾಳೆ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯ ಉಭಯ ತಂಡಗಳಿಗೂ ನಿರ್ಣಾಯಕವಾಗಿದ್ದು, ಪ್ಲೇಆಫ್ ಹಾದಿಯನ್ನು ನಿರ್ಧರಿಸುವ ಪಂದ್ಯವೆಂದೇ ಹೇಳಬಹುದು.
ಐದು ಬಾರಿಯ ಚಾಂಪಿಯನ್ ಚೆನ್ನೈ ತಂಡ ಈವರೆಗೆ 10 ಪಂದ್ಯಗಳಲ್ಲಿ ಐದು ಗೆಲುವು, ಐದು ಸೋಲು ಕಂಡು ಅಂಕಪಟ್ಟಿಯಲ್ಲಿ ಮಧ್ಯಮ ಸ್ಥಾನದಲ್ಲಿದೆ. ಆದರೆ ಕಳೆದ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿರುವ ತಂಡ ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಿದೆ. ಹೀಗಾಗಿ ಈ ಪಂದ್ಯ ಗೆದ್ದು ಪ್ಲೇಆಫ್ ರೇಸ್‌ನಲ್ಲಿ ಬಲವಾಗಿ ಉಳಿಯುವ ಲೆಕ್ಕಾಚಾರದಲ್ಲಿದೆ.
ಇದನ್ನೂ ಓದಿ:
ಇನ್ನೊಂದೆಡೆ, ಲಕ್ನೋ ತಂಡದ ಪರಿಸ್ಥಿತಿ ಸಂಕಷ್ಟದಲ್ಲಿದೆ. 10 ಪಂದ್ಯಗಳಲ್ಲಿ ಕೇವಲ ಮೂರು ಗೆಲುವು ದಾಖಲಿಸಿರುವ ತಂಡ ಕೊನೆಯ ಸ್ಥಾನಕ್ಕೆ ಜಾರಿದೆ. ಆದರೂ ಕಳೆದ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧದ ಗೆಲುವು ಹೊಸ ಉತ್ಸಾಹ ತುಂಬಿದೆ.
ಮುಖಾಮುಖಿ ದಾಖಲೆ ನೋಡಿದರೆ ಉಭಯ ತಂಡಗಳು ಸಮಬಲದ ಹೋರಾಟ ನೀಡಿವೆ. ಆದರೆ ಪ್ರಸ್ತುತ ಫಾರ್ಮ್, ತವರಿನ ಅನುಕೂಲ ಹಾಗೂ ನಿರಂತರ ಪ್ರದರ್ಶನದ ಆಧಾರದಲ್ಲಿ ಚೆನ್ನೈಗೆ ತುಸು ಮೇಲುಗೈ ಕಂಡುಬರುತ್ತಿದೆ. ಹೀಗಾಗಿ ಶನಿವಾರದ ಈ ಹೋರಾಟದಲ್ಲಿ ಗೆಲುವಿಗಾಗಿ ಉಭಯ ತಂಡಗಳು ಸಂಪೂರ್ಣ ಶಕ್ತಿ ಹಾಕುವುದು ಖಚಿತ.



