May 10, 2026
Sunday, May 10, 2026
spot_img

BIG BREAKING | ಚಿತ್ರದುರ್ಗದ ‘ಧೀಮಂತ ನಾಯಕ’ ಸಚಿವ ಡಿ.ಸುಧಾಕರ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಶಾಸಕರು ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ. ಸುಧಾಕರ್ ಅವರು ಇಂದು ಮುಂಜಾನೆ 3:15 ಗಂಟೆಗೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸುಧಾಕರ್ ಅವರು ಮೊದಲು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ನಂತರ ಅವರಿಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ತಿಳಿಸಿವೆ.

ಸಚಿವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಈ ಕೆಳಗಿನಂತೆ ವ್ಯವಸ್ಥೆ ಮಾಡಲಾಗಿದೆ.

ಮಧ್ಯಾಹ್ನ 12:00ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಸಾರ್ವಜನಿಕ ದರ್ಶನ. ನಂತರ ಅವರ ಸ್ವಕ್ಷೇತ್ರವಾದ ಹಿರಿಯೂರಿನ ನೆಹರು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಸಂಜೆ ಚಳ್ಳಕೆರೆಯ ಡಿ. ಸುಧಾಕರ್ ಕ್ರೀಡಾಂಗಣದಲ್ಲಿ ಅಂತಿಮ ವಿಧಿವಿಧಾನಗಳ ಪೂರ್ವಭಾವಿಯಾಗಿ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು.

ಸಚಿವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಹಿರಿಯೂರು ಮತ್ತು ಚಳ್ಳಕೆರೆಯ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರಲ್ಲಿ ಮೌನ ಆವರಿಸಿದ್ದು, ಅಂತಿಮ ದರ್ಶನಕ್ಕಾಗಿ ಸಾವಿರಾರು ಜನರು ಆಗಮಿಸುವ ನಿರೀಕ್ಷೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !